ಚಿಕ್ಕೋಡಿ: ಚಿಕ್ಕೋಡಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿಯವರ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಭರ್ಜರಿ ವಿಜಯ ಸಾಧಿಸಿದ್ದಾರೆ. ಈ ನಡುವೆ ಮತ ಎಣಿಕೆಯ ನಡುವೆ ಕಾಂಗ್ರೆಸ್ ಕಾರ್ಯಕರ್ತರು ವಿವಾದಾತ್ಮಕ ಘೋಷಣೆ ಕೂಗಿದ ಘಟನೆ ನಡೆದಿದೆ.
ಮತ ಎಣಿಕೆ ಸಾಗುತ್ತಿರುವ ನಡುವೆ ಪ್ರಿಯಾಂಕಾ ಜಾರಕಿಹೊಳಿ ಮುನ್ನಡೆ ಸಾಗುತ್ತಿದ್ದಂತೆ, ಈ ವೇಳೆ ಅಭಿಮಾನಿಯೊಬ್ಬ, ಮೋದಿ ಹಮಾರ ಕು# ಹೈ ಎಂದು ವಿವಾದಾತ್ಮಕ ಘೋಷಣೆ ಕೂಗಿದ್ದಾರೆ. ಅಲ್ಲದೆ ಪಾಕಿಸ್ತಾನ ಪರ ಘೋಷಣೆಗಳು ಕೇಳಿಬಂದಿವೆ ಎನ್ನಲಾಗಿದೆ. ಪ್ರಧಾನಿ ಮೋದಿಯವರನ್ನು ಅಶ್ಲೀಲ ಪದಗಳಿಂದ ನಿಂದಿಸಿರುವ ವಿಡಿಯೋ ವೈರಲ್ ಆಗಿದೆ.