ಬ್ರಹ್ಮಶ್ರೀ ನಾರಾಯಣಗುರು ಧರ್ಮ ಪರಿಪಾಲನಾ ಸಂಘ (ನೋಂ) ಬೆಂಗಳೂರು ಇದರ ಉಡುಪಿ ಜಿಲ್ಲಾ ಘಟಕದ ವತಿಯಿಂದ 3ನೇ ವಾರ್ಷಿಕೋತ್ಸವದ ಪ್ರಯುಕ್ತ ನ.2ರಂದು ಮಣಿಪುರ, ನಾರಾಯಣಗುರು ಸಭಾಭವನದಲ್ಲಿ ವಿದ್ಯಾರ್ಥಿ ವೇತನ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮಗಳು ನಡೆಯಲಿವೆ. ರಾತ್ರಿ 7.30ಕ್ಕೆ ಸಭಾ ಕಾರ್ಯಕ್ರಮ ಆರಂಭಗೊಳ್ಳಲಿದೆ. ಸಂಸದ ಕೋಟ ಶ್ರೀನಿವಾಸ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಬಿಎಸ್‌ಎನ್‌ಡಿಪಿ ಉಡುಪಿ ಜಿಲ್ಲಾಧ್ಯಕ್ಷ ಶ್ರೀಧರ್ ಅಮೀನ್ ಮಣಿಪುರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕರುಗಳಾದ ಸುರೇಶ್ ಶೆಟ್ಟಿ ಗುರ್ಮೆ, ಸುನಿಲ್ ಕುಮಾರ್, ಉಮಾನಾಥ ಕೋಟ್ಯಾನ್, ಯಶಪಾಲ್ ಸುವರ್ಣ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮತ್ತಿತರರು ಕಾರ್ಯಕ್ರಮದ ಅತಿಥಿಗಳಾಗಿದ್ದಾರೆ.