ಎಸ್ ಎನ್ ಮೂಡಬಿದ್ರಿ ಪಾಲಿಟೆಕ್ನಿಕ್ ಮೂಡಬಿದಿರೆ ಇದರ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ಕಾಲೇಜಿನ ಆವರಣದಲ್ಲಿ ಅಗ್ನಿ ಸುರಕ್ಷತಾ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು. ಮೂಡಬಿದಿರೆಯ ಅಗ್ನಿಶಾಮಕ ದಳದ ಸಿಬ್ಬಂದಿ ವರ್ಗದವರು ಪ್ರಾತ್ಯಕ್ಷಿಕೆಯನ್ನು ನಡೆಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ಯುವ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮ ಅಧಿಕಾರಿ ರವಳನಾಥ ಪ್ರಭು, ಎಲೆಕ್ಟ್ರಿಕಲ್ ವಿಭಾಗದ ಉಪನ್ಯಾಸಕರಾದ ಹರೀಶ್ ತಂತ್ರಿ, ಘಟಕ ನಾಯಕರು , ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡರು.
ಎಸ್.ಎನ್.ಎಂ ಪಾಲಿಟೆಕ್ನಿಕ್ : ಅಗ್ನಿ ಸುರಕ್ಷತಾ ಪ್ರಾತ್ಯಕ್ಷಿಕೆ
RELATED ARTICLES