ಗಾಜಿನ ಬ್ಲಾಕ್​ ಮೈಮೇಲೆ ಬಿದ್ದು ಸಾಮಾಜಿಕ ಕಾರ್ಯಕರ್ತ ಮೃತ್ಯು

0
27

ಉಡುಪಿ : ನಿಟ್ಟೂರಿನ ಶ್ರೀದೇವಿ ಗ್ಲಾಸ್​ ಫ್ಯಾಕ್ಟರಿಯಲ್ಲಿ ಗಾಜಿನ ಬ್ಲಾಕ್​ಗಳನ್ನು ಇಳಿಸುತ್ತಿದ್ದ ವೇಳೆ ಸಂಭವಿಸಿದ ಅವಘಡದಲ್ಲಿ ಸಾಮಾಜಿಕ ಕಾರ್ಯಕರ್ತ ಹಾಗೂ ರಿಕ್ಷಾ ಚಾಲಕ ಸುನಿಲ್​ ಬೈಲಕೆರೆ (45) ಮೃತಪಟ್ಟಿದ್ದಾರೆ.

ಕೃಷ್ಣಮಠದ ಪರಿಸರದ ನಿವಾಸಿಯಾಗಿದ್ದ ಸುನಿಲ್​ ಅವರು ಶಿರೂರು ಮಠದ ಕೀರ್ತಿಶೇಷ ಲಕ್ಷ್ಮೀವರ ತೀರ್ಥ ಶ್ರೀಪಾದರ ಕಾರು ಚಾಲಕರಾಗಿಯೂ ಸೇವೆ ಸಲ್ಲಿಸಿದ್ದರು.

ನಗರದಲ್ಲಿ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದ ಅವರು, ಕಲ್ಸಂಕ ಜಂಕ್ಷನ್​ನಲ್ಲಿ ವಾಹನ ದಟ್ಟಣೆಯಿಂದ ಸಂಚಾರ ಅಸ್ತವ್ಯಸ್ತಗೊಂಡಾಗ ಪೊಲೀಸರೊಂದಿಗೆ ಕೈಜೋಡಿಸಿ ಸುಗಮ ಸಂಚಾರಕ್ಕೆ ಸಹಕರಿಸುತ್ತಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಬಂಧುಬಳಗವನ್ನು ಅಗಲಿದ್ದಾರೆ.