ಬೆಳ್ತಂಗಡಿ: ಮಹಾತ್ಮ ಗಾಂಧಿ ಗ್ರಾಮ ಪಂಚಾಯತ್ ಚಾರ್ಮಾಡಿಯಲ್ಲಿ 2026-27ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ), 15ನೇ ಹಣಕಾಸು ಯೋಜನೆ ಹಾಗೂ ರಾಜ್ಯ ಹಣಕಾಸು ಆಯೋಗದ ಅನುದಾನದಡಿ ಅನುಷ್ಠಾನಗೊಳಿಸಲಾದ ವಿವಿಧ ಕಾಮಗಾರಿಗಳ ಸಾಮಾಜಿಕ ಪರಿಶೋಧನೆ ಮತ್ತು ವಿಶೇಷ ಗ್ರಾಮಸಭೆ ನಡೆಯಿತು.
ನವೆಂಬರ್ 16ರಂದು ಸೋಮವಾರ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ಪ್ರಥಮ ಹಾಗೂ ದ್ವಿತೀಯ ಹಂತದ ಸಾಮಾಜಿಕ ಪರಿಶೋಧನೆ ಮತ್ತು ವಿಶೇಷ ಗ್ರಾಮಸಭೆಯ ಅಧ್ಯಕ್ಷತೆಯನ್ನು ಬೆಳ್ತಂಗಡಿ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಚಂದ್ರಶೇಖರ ಅವರು ವಹಿಸಿದ್ದರು.
ಸಭೆಯಲ್ಲಿ ಆಡಳಿತಾಧಿಕಾರಿ ಜೋಸೆಫ್ ಪಿ.ಎಸ್., ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಜಿ., ಕಾರ್ಯದರ್ಶಿ ಸರೋಜಿನಿ ಕೆ., ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಸಂಜೀವ ಎಂ.ಕೆ. ಹಾಗೂ ತಾಲೂಕು ಸಂಯೋಜಕರಾದ ರಾಜೀವ್ ಸಾಲ್ಯಾನ್ ಮತ್ತು ವಿಬಿಜಿರಾಮ್ ಜಿ. ಅವರು ವಿವಿಧ ಯೋಜನೆಗಳ ಅನುಷ್ಠಾನ, ಕಾಮಗಾರಿಗಳ ವಿವರ ಹಾಗೂ ಅನುದಾನದ ಬಳಕೆಯ ಕುರಿತು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಪಂಚಾಯತ್ ಸಿಬ್ಬಂದಿಗಳಾದ ಸುಕೇಶ್ ಜಿ., ಪ್ರಕಾಶ್, ನಳಿನಾಕ್ಷಿ, ಜಯಶ್ರೀ ಎ., ಅಶ್ವಿನಿ, ಅಂಜಲಿ, ಗ್ರಂಥಾಲಯ ಮೇಲ್ವಿಚಾರಕಿ ಜ್ಯೋತಿ ಬಿ., ವಿಆರ್ಡಬ್ಲ್ಯು ಚೇತನ್, ಜಯಮಾಲಾ, ಸಂಜೀವಿನಿ ಒಕ್ಕೂಟದ ಅಧ್ಯಕ್ಷರು, ಎಂಬಿಕೆ ಭವ್ಯ, ಮಾಜಿ ಅಧ್ಯಕ್ಷೆ ಶಾರದಾ ಎ., ಮಾಜಿ ಸದಸ್ಯರಾದ ಶಾಜಿ, ಸಿದ್ದಿಕ್, ರಹಿಮ್, ನರೇಗಾ ಫಲಾನುಭವಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಸರ್ಕಾರಿ ಯೋಜನೆಗಳಡಿ ಕೈಗೊಂಡ ಕಾಮಗಾರಿಗಳ ಪರಿಶೀಲನೆ, ಅನುಷ್ಠಾನದ ಪಾರದರ್ಶಕತೆ ಹಾಗೂ ಸಾರ್ವಜನಿಕರ ಭಾಗವಹಿಸುವಿಕೆಗೆ ಸಾಮಾಜಿಕ ಪರಿಶೋಧನೆ ಮತ್ತು ವಿಶೇಷ ಗ್ರಾಮಸಭೆ ವೇದಿಕೆಯಾಯಿತು.

