Sunday, July 14, 2024
Homeಉಡುಪಿಸೋಮಶೇಖರ್ ಭಟ್ ಸಚ್ಚಾರಿತ್ರ್ಯ ವ್ಯಕ್ತಿತ್ವ, ಕಾರ್ಯತತ್ಪರತೆ ಪಕ್ಷದ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ: ಯಶ್ಪಾಲ್ ಸುವರ್ಣ

ಸೋಮಶೇಖರ್ ಭಟ್ ಸಚ್ಚಾರಿತ್ರ್ಯ ವ್ಯಕ್ತಿತ್ವ, ಕಾರ್ಯತತ್ಪರತೆ ಪಕ್ಷದ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ: ಯಶ್ಪಾಲ್ ಸುವರ್ಣ

ಭಾರತೀಯ ಜನತಾ ಪಾರ್ಟಿಯನ್ನು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಸಹಿತ ಕರಾವಳಿ ಕರ್ನಾಟಕದಲ್ಲಿ ಸದೃಢವಾಗಿ ಕಟ್ಟಿ ಬೆಳೆಸಲು ಅಹರ್ನಿಶಿ ಶ್ರಮಿಸಿದ ಪಕ್ಷದ ಹಿರಿಯ ನಾಯಕ ಮಲ್ಪೆ ಸೋಮಶೇಖರ ಭಟ್ ಅವರ ಸಚ್ಚಾರಿತ್ರ್ಯದ ವ್ಯಕ್ತಿತ್ವ, ಬದ್ಧತೆ ಹಾಗೂ ದೂರದರ್ಶಿತ್ವದ ಚಿಂತನೆಗಳು ಪಕ್ಷದ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ಪಾಲ್ ಎ. ಸುವರ್ಣ ಹೇಳಿದರು.

ಅವರು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅಧ್ಯಕ್ಷತೆಯಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಕಛೇರಿಯಲ್ಲಿ ನಡೆದ ಪಕ್ಷದ ಹಿರಿಯ ನಾಯಕ ಬಿ.ಸೋಮಶೇಖರ ಭಟ್ ರವರ ನುಡಿ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ, ನುಡಿ ನಮನ ಸಲ್ಲಿಸಿದರು.

ಉಡುಪಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕಡಿಯಾಳಿ ಇದರ ಅಧ್ಯಕ್ಷ ಪ.ವಸಂತ ಭಟ್, ಕಾರ್ಕಳದ ಹಿರಿಯ ಉದ್ಯಮಿ ಬೋಳ ಪ್ರಭಾಕರ್ ಕಾಮತ್, ಮಾಜಿ ನಗರಸಭಾ ಸದಸ್ಯ ಮೋಹನ ಉಪಾಧ್ಯಾಯ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆಯವರು ನುಡಿ ನಮನಗಳನ್ನು ಸಲ್ಲಿಸುತ್ತಾ ಮಲ್ಪೆ ಸೋಮಶೇಖರ ಭಟ್ ರವರ ತತ್ವಾದರ್ಶಗಳನ್ನು ವಿಶ್ಲೇಷಿಸಿ, ಅವರ ಉದಾತ್ತ ಚಿಂತನೆಗಳ ಗುಣಗಾನಗೈದು, ಅವರು ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳ ನೇತೃತ್ವ ವಹಿಸಿ ಕಾರ್ಯಕರ್ತರನ್ನು ಬೆಳೆಸಿದ ಪರಿ, ಎಲ್ಲರನ್ನೂ ಒಗ್ಗೂಡಿಸಿ ರಾಜಕೀಯ ಜಾಣ್ಮೆಯಿಂದ ಪಕ್ಷವನ್ನು ಮುನ್ನಡೆಸಿದ ರೀತಿ ಸರ್ವಕಾಲಿಕ ಮಾದರಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಹಿರಿಯರಾದ ಕೆ.ಟಿ. ಪೂಜಾರಿ ಕೊಡವೂರು, ಮಲ್ಪೆ ವಿಶ್ವನಾಥ ಭಟ್, ಲೋಕಯ್ಯ ಪಣಿಯಾಡಿ, ಚಿತ್ತರಂಜನ್ ಭಟ್, ನಗರಸಭಾ ಸದಸ್ಯೆ ಲಕ್ಷ್ಮೀ ಚಿತ್ತರಂಜನ್ ಭಟ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್ ಬೈಲೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ರುಡಾಲ್ಫ್, ಬಿಜೆಪಿ ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ಪ್ರಧಾನ ಕಾರ್ಯದರ್ಶಿ ಜಗದೀಶ್ ಆಚಾರ್ಯ ಸಹಿತ ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಪ್ರಕೋಷ್ಟ, ಮಂಡಲಗಳ ಪದಾಧಿಕಾರಿಗಳು, ನಗರಸಭಾ ಸದಸ್ಯರು ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿ ನುಡಿ ನಮನ ಸಲ್ಲಿಸಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ಕಾರ್ಯಕ್ರಮ ನಿರೂಪಿಸಿ, ಜಿಲ್ಲಾ ಮಾಧ್ಯಮ ಪ್ರಮುಖ್ ಗಿರೀಶ್ ಎಮ್. ಅಂಚನ್ ವಂದಿಸಿದರು.

RELATED ARTICLES
- Advertisment -
Google search engine

Most Popular