ಅನೈತಿಕ ಸಂಬಂಧದ ಅನುಮಾನಕ್ಕೆ ತಂದೆಯನ್ನೇ ಕೊಂದ ಮಗ..!

0
13

ಛತ್ತೀಸ್‌ಗಢ : ರಾಜ್ಯದ ರಾಜ್‌ನಾಂದಗಾಂವ್ ಪ್ರದೇಶದಲ್ಲಿ ಕುಟುಂಬ ಕಲಹ ಭೀಕರ ತಿರುವು ಪಡೆದಿದ್ದು, ತಂದೆ ಮತ್ತು ಪತ್ನಿಯ ಅನೈತಿಕ ಸಂಬಂಧ ಕಂಡು ಆಕ್ರೋಶಗೊಂಡ ಮಗ ಕೋಲಿನಿಂದ ಹಲ್ಲೆ ನಡೆಸಿ ತಂದೆಯನ್ನು ಹತ್ಯೆ ಮಾಡಿದ ಘಟನೆ ನಡೆದಿದೆ.

ಘಟನೆಯಲ್ಲಿ ತಂದೆ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡ ಪತ್ನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.

ಈ ಘಟನೆ ಖಾಡ್‌ಗಾಂವ್ ಪೊಲೀಸ್ ಠಾಣೆ ವ್ಯಾಪ್ತಿಯ ಕಟ್ಟಪರ್ ಗ್ರಾಮದಲ್ಲಿ ನಡೆದಿದೆ. ಆರೋಪಿಯು ಕೆಲಸ ಮುಗಿಸಿ ಮನೆಗೆ ಬಂದಾಗ ಪತ್ನಿ ಮನೆಯಲ್ಲಿರಲಿಲ್ಲ. ಬಳಿಕ ಹುಡುಕುತ್ತಾ ಹೊಲಕ್ಕೆ ತೆರಳಿದ ವೇಳೆ ತಂದೆ ಮತ್ತು ಪತ್ನಿ ಆಕ್ಷೇಪಾರ್ಹ ಸ್ಥಿತಿಯಲ್ಲಿ ಇದ್ದುದನ್ನು ಕಂಡು ತೀವ್ರ ಕೋಪಗೊಂಡಿದ್ದಾನೆ ಎನ್ನಲಾಗಿದೆ.

ಕೋಪದ ಭರದಲ್ಲಿ ಕೈಯಲ್ಲಿದ್ದ ಕೋಲಿನಿಂದ ಇಬ್ಬರ ಮೇಲೂ ಹಲ್ಲೆ ನಡೆಸಿದ್ದಾನೆ. ಪರಿಣಾಮ ತಂದೆ ಸ್ಥಳದಲ್ಲೇ ಮೃತಪಟ್ಟಿದ್ದು, ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾಳೆ.

ಘಟನೆಯ ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ತಂದೆ ಮತ್ತು ಪತ್ನಿಯ ನಡುವಿನ ಅನೈತಿಕ ಸಂಬಂಧವೇ ಘಟನೆಗೆ ಕಾರಣ ಎಂದು ತಿಳಿಸಿದ್ದಾನೆ.

ಗಾಯಾಳು ಮಹಿಳೆಯನ್ನು ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here