ಪುತ್ತೂರು : ಶ್ರೀಕೃಷ್ಣ ಸಮೂಹ ವಿದ್ಯಾ ಸಂಸ್ಥೆಗಳು ಪಟ್ಟೆ, ಬಡಗ ಬಡಗನ್ನೂರು, ತುಳು ವರ್ಲ್ಡ್ ಫೌಂಡೇಶನ್ ಕಟೀಲು ಹಾಗೂ ತುಳುವ ಮಹಾಸಭೆ ಪುತ್ತೂರು ವಲಯ ಇವರ ಆಶ್ರಯದಲ್ಲಿ ‘ಸೋಣದ ದುನಿಪು’ ಹಾಗೂ ತುಳುವೇಶ್ವರಿ ಆಟ ಕೂಟ ಕಾರ್ಯಕ್ರಮ ಆ.22ರಂದು ಶನಿವಾರ ಮಧ್ಯಾಹ್ನ 2 ಗಂಟೆಗೆ ಪಟ್ಟೆಯ ಶ್ರೀಕೃಷ್ಣ ಪ್ರೌಢಶಾಲೆಯ ಸಭಾಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಅಂಗವಾಗಿ ತುಳುವ ವಾಲ್ಮೀಕಿ ಮಂದಾರ-ಕೇಶವ ರಚಿಸಿದ ‘ಮಾಯಕದ ಬಿನ್ನೆದಿ’ ತುಳು ಯಕ್ಷಗಾನ ಪ್ರದರ್ಶನ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ದ್ವಾರಕಾ ಸಮೂಹ ಸಂಸ್ಥೆಗಳು ಪುತ್ತೂರು ಹಾಗೂ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ ಇದರ ಅಧ್ಯಕ್ಷ ಗೋಪಾಲಕೃಷ್ಣ ಭಟ್ ವಹಿಸಲಿದ್ದಾರೆ. ತುಳು ವರ್ಲ್ಡ್ ಫೌಂಡೇಶನ್ ಅಧ್ಯಕ್ಷೆ ಭಾನುಮತಿ ಶೆಟ್ಟಿ ಕಕ್ವ ಗುತ್ತು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ‘ಸೋಣದ ದುನಿಪು’ ಕಾರ್ಯಕ್ರಮವನ್ನು ತುಳು ವರ್ಲ್ಡ್ ಫೌಂಡೇಶನ್ ನಿರ್ದೇಶಕ ಡಾ. ರಾಜೇಶ್ ಕೃಷ್ಣ ಆಳ್ವ ನೆರವೇರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ರಾಮಕೃಷ್ಣ ಹೈಸ್ಕೂಲ್ ಪುತ್ತೂರು ಸಂಚಾಲಕ ಹೇಮನಾಥ್ ಶೆಟ್ಟಿ ಕಾವು, ಪ್ರಗತಿಪರ ಕೃಷಿಕ ಅಮ್ಮಣ್ಣ ರೈ ದೇರ್ಲ, ದ್ವಾರಕಾ ಪ್ರತಿಷ್ಠಾನ ಪುತ್ತೂರು ಕಾರ್ಯದರ್ಶಿ ಗಣರಾಜ ಕುಂಬ್ಳೆ ಹಾಗೂ ಮಂದಾರ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಪ್ರಮೋದ್ ಸಪ್ರೆ ಭಾಗವಹಿಸಲಿದ್ದಾರೆ.
ಗೌರವ ಉಪಸ್ಥಿತಿಯಲ್ಲಿ ಮೋಹನ್ ರೈ ಮನವರಿಕೆ, ವೇದಾವತಿ ರಾಜೇಶ್, ನಿತ್ಯಾನಂದ ಶೆಟ್ಟಿ, ವಸಂತ ರೈ, ಅರವಿಂದ ಬೆಳ್ಚಡ ಸೇರಿದಂತೆ ಗಣ್ಯರು ಉಪಸ್ಥಿತರಿರಲಿದ್ದಾರೆ.
ತುಳುನಾಡಿನ ಸಂಸ್ಕೃತಿ, ಪರಂಪರೆ ಹಾಗೂ ಕಲಾ ವೈಭವವನ್ನು ಪ್ರತಿಬಿಂಬಿಸುವ ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘಟಕರು ಮನವಿ ಮಾಡಿದ್ದಾರೆ.

