ಶಿರ್ವ: ಸೂಡ ಸೊರ್ಪು ಶ್ರೀ ದುರ್ಗಾಪರಮೇಶ್ವರೀ ದೇಗುಲದಲ್ಲಿ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಮತ್ತು ಚಂಡಿಕಾ ಹೋಮವು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ ಕಟಪಾಡಿಯ ಪೀಠಾಧಿಪತಿ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿ ಮತ್ತು ಅರೆಮಾದನಹಳ್ಳಿ ವಿಶ್ವ ಬ್ರಾಹ್ಮಣ ಮಹಾಸಂಸ್ಥಾನ ಮಠದ ಶಿವಸುಜ್ಞಾನ ತೀರ್ಥ ಮಹಾಸ್ವಾಮಿಗಳ ಉಪಸ್ಥಿತಿಯಲ್ಲಿ ಮೂಡಬಿದಿರೆ ಬ್ರಹ್ಮಶ್ರೀ ಪುರೋಹಿತ್ ಎನ್. ಕೇಶವ ತಂತ್ರಿಗಳ ಹಾಗೂ ವೈದಿಕ ವೃಂದದ ಸಹಯೋಗದೊಂದಿಗೆ ಮೇ 11 ಮತ್ತು 12ರಂದು ನಡೆಯಲಿದೆ. ಧಾರ್ಮಿಕ ಕಾರ್ಯಕ್ರಮಗಳು ಮೇ 10 ರಂದು ಬೆಳಗ್ಗೆ 8.30ಕ್ಕೆ ಗಣಪತಿ ಹೋಮ, ದೈವಗಳಿಗೆ ಕಲಾಹೋಮ,ಮಂಟಪ ಸಂಸ್ಕಾರ,ಮಂಡಲರಚನೆ, ಸಂಜೆಮಂಡಲ ಪೂಜೆ, ಕಲಶ ಪೂರಣ, ಬ್ರಹ್ಮಕಲಶ ಪೂಜೆ, ಅಧಿವಾಸ ಹೋಮಬಲಿ, ಮೇ 11 ರಂದು ಬೆಳಗ್ಗೆ ಅಷ್ಟಬಂಧ ಲೇಪನ, 8.20ರ ವೃಷಭ ಲಗ್ನದಲ್ಲಿ ಬ್ರಹ್ಮಕಲಷಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಆಚಾರ್ಯ ಪೂಜೆ, ದಂಪತಿ ಪೂಜೆ ಸುವಾಸಿನಿ ಪೂಜೆ, ಬ್ರಹ್ಮಾರ್ಪಣೆ, ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ಮೇ 12ರಂದು ಬೆಳಗ್ಗೆ 9 ರಿಂದ ಚಂಡಿಕಾಹೋಮ, ಪೂರ್ಣಾಹುತಿ ಮಹಾಪೂಜೆ, ಮಂತ್ರಾಕ್ಷತೆ, ಅನ್ನಸಂತರ್ಪಣೆ ನಡೆಯಲಿದೆ. ಧಾರ್ಮಿಕ ಸಭಾ ಕಾರ್ಯಕ್ರಮ ಸಂಜೆ 4.30ರಿಂದ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಪೀಠಾಧಿಪತಿ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿ ಮತ್ತು ಅರೆಮಾದನಹಳ್ಳಿ ವಿಶ್ವ ಬ್ರಾಹ್ಮಣ ಮಹಾಸಂಸ್ಥಾನ ಮಠದ ಶಿವಸುಜ್ಞಾನ ತೀರ್ಥ ಮಹಾಸ್ವಾಮಿಗಳು ಆಶೀರ್ವಚನ ನೀಡಲಿರುವರು. ಸೊರ್ಪು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಕಾರ್ಯಕಾರಿ ಸಮಿತಿಯ ಅಧ್ಯಕ್ಷ ಹರೀಶ್ ಆಚಾರ್ಯ ಅಧ್ಯಕ್ಷತೆ ವಹಿಸಲಿದ್ದು, ಬಾಯಾರು ವಿದ್ವಾನ್ ಹಿರಣ್ಯ ವೆಂಕಟೇಶ್ವರ ಭಟ್ ಧಾರ್ಮಿಕ ಉಪನ್ಯಾಸ ನೀಡಲಿರುವರು. ಮುಖ್ಯ ಅತಿಥಿಗಳಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ವಿ. ಸುನಿಲ್ ಕುಮಾರ್, ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಮತ್ತಿತರ ಗಣ್ಯರು ಭಾಗವಹಿಸಲಿರುವರು. ಮುಂಬಯಿ ಉದ್ಯಮಿ ಕೃಷ್ಣ ವಿ.ಆಚಾರ್ಯ, ಪುರುಷೋತ್ತಮ ಆಚಾರ್ಯ ಬೆಳ್ಳಣ್, ಶ್ರೀನಿವಾಸ ಆಚಾರ್ಯ ಸೊರ್ಪು ಮತ್ತು ಸತೀಶ್ ಆಚಾರ್ಯ ಸೊರ್ಪು ಅವರಿಗೆ ಗೌರವಾಭಿನಂದನೆ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಮೇ 12 ರಂದು ರಾತ್ರಿ 9 ರಿಂದ ಸಮಾಜರತ್ನ ಲೀಲಾಧರ ಶೆಟ್ಟಿ ಸಾರಥ್ಯದ ಕಾಪು ರಂಗತರಂಗ ಕಲಾವಿದರಿಂದ ಕುಟ್ಟಣ್ಣನ ಕುಟುಂಬ ತುಳು ಹಾಸ್ಯಮಯ ನಾಟಕ ನಡೆಯಲಿದೆ ಎಂದು ಕಾರ್ಯಕಾರಿ ಸಮಿತಿಯು ಪ್ರಕಟನೆ ತಿಳಿಸಿದೆ.