ಮುಲ್ಕಿ:ಸೌತ್ ಕೆನರಾ ಫೋಟೋ ಗ್ರಾಫರ್ಸ್ ವಿವಿದೋದ್ದೇಶ ಸಹಕಾರ ಸಂ (ನಿ)ಮಂಗಳೂರು ಇದರ ಆಡಳಿತ ಮಂಡಳಿ ನಿರ್ದೇಶಕರಾಗಿ ಪಾವಂಜೆ ಮೋಹನ್ ರಾವ್ ಅವಿರೋಧವಾಗಿ ಸಾಮಾನ್ಯ ಸ್ಥಾನದಿಂದ ಎರಡನೇ ಅವಧಿಗೆ ಆಯ್ಕೆಯಾಗಿದ್ದಾರೆ.
ನೂತನ ನಿರ್ದೇಶಕರಾಗಿ ಆಯ್ಕೆಯಾದ ಪಾವಂಜೆ ಮೋಹನ್ ರಾವ್ ರವರನ್ನು ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ, ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು, ಧರ್ಮದಕ್ಷಿ ಡಾ. ಹರಿಕೃಷ್ಣ ಪುನರೂರು, ಉದ್ಯಮಿ ಅರವಿಂದ ಪೂಂಜಾ ಕಾರ್ನಾಡ್, ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ವಸಂತ್ ಬೆರ್ನಾಡ್, ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವಪ್ರಸಾದ್ ಪುನರೂರು
ಪಿಸಿಎ ಬ್ಯಾಂಕ್ ಅಧ್ಯಕ್ಷ ಸತೀಶ್ ಭಟ್ ಕೊಳುವೈಲು,ಉದ್ಯಮಿ ಜಾನ್ ಕ್ವಾಡ್ರಾಸ್(ಸುರಭಿ) ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ಪೈರ್ ಅಧ್ಯಕ್ಷ ವೆಂಕಟೇಶ್ ಹೆಬ್ಬಾರ್,ಮಾಜೀ ಧಾರ್ಮಿಕ ಪರಿಷತ್ ಸದಸ್ಯ ಗಿರಿ ಪ್ರಕಾಶ್ ತಂತ್ರಿ ಪೊಳಲಿ, ಸೌತ್ ಕೆನರಾ ಫೋಟೋಗ್ರಾಫರ್ ಎಸೋಸಿಯೇಷನ್ ಮುಲ್ಕಿ ವಲಯದ ಅಧ್ಯಕ್ಷ ಪ್ರಕಾಶ್ ಸುವರ್ಣ, ಮೂಕಿ ಪತ್ರಕರ್ತರ ಸಂಘದ ಅಧ್ಯಕ್ಷ ನಿಶಾಂತ್ ಶೆಟ್ಟಿ, ಸದಸ್ಯರಾದ ಹರೀಶ್ ಹೆಜ್,ಪುನೀತ್ ಕೃಷ್ಣ, ಸಾಮಾಜಿಕ ಕಾರ್ಯಕರ್ತರಾದ ಧರ್ಮಾನಂದ ಶೆಟ್ಟಿಗಾರ್, ಮತ್ತಿತರರು ಅಭಿನಂದನೆ ಸಲ್ಲಿಸಿದ್ದಾರೆ.