Thursday, December 5, 2024
HomeUncategorizedಪ್ರತಿಭಾ ಕಾರಂಜಿ ಸ್ಫರ್ಧೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ ವಿದ್ಯಾಗಿರಿಯ ವಿದ್ಯಾರ್ಥಿಗಳ ವಿಶೇಷ ಸಾಧನೆ

ಪ್ರತಿಭಾ ಕಾರಂಜಿ ಸ್ಫರ್ಧೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ ವಿದ್ಯಾಗಿರಿಯ ವಿದ್ಯಾರ್ಥಿಗಳ ವಿಶೇಷ ಸಾಧನೆ

ಬಂಟ್ವಾಳ: ಶ್ರೀ ಸತ್ಯಸಾಯಿ ಲೋಕಸೇವಾ ಪ್ರೌಢಶಾಲೆ ಅಳಿಕೆ ಇಲ್ಲಿ ನಡೆದ ಕಿರಿಯ, ಹಿರಿಯ ಮತ್ತು
ಪ್ರೌಢಶಾಲಾ ವಿಭಾಗದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಫರ್ಧೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ
ಮಾಧ್ಯಮ ಶಾಲೆ ವಿದ್ಯಾಗಿರಿಯ ವಿದ್ಯಾರ್ಥಿಗಳು ವಿಶೇಷ ಸಾಧನೆ ಮಾಡಿದ್ದಾರೆ. ಭಾಗವಹಿಸಿದ ೩೧ ವಿದ್ಯಾರ್ಥಿಗಳಲ್ಲಿ ಹಿರಿಯ ವಿಭಾಗದಲ್ಲಿ ಲಿಖಿತಾ.ಯು ಇವರು ಭಾವಗೀತೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಹಾಗೂ ಅವನಿ ಮತ್ತು ಬಳಗ ಕವ್ವಾಲಿಯಲ್ಲಿ ದ್ವಿತೀಯ ಸ್ಥಾನ, ರೋಶ್ನಿ ಹಿಂದಿ ಭಾಷಣದಲ್ಲಿ ದ್ವೀತಿಯ ಸ್ಥಾನ ಹಾಗೂ ಕಿರಿಯ ವಿಭಾಗದಲ್ಲಿ ಆರ್ವಿ ಎಸ್ ಪೂಂಜ ಇವರು ಅಭಿನಯ ಗೀತೆಯಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ. ಇವರಿಗೆ ಶ್ರೀ ವೆಂಕಟರಮಣ ಸ್ವಾಮೀ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಕೂಡಿಗೆ ಪಾಂಡುರಂಗ ಶೆಣೈ, ಕಾರ್ಯದರ್ಶಿಗಳಾದ ಕೂಡಿಗೆ ಪ್ರಕಾಶ್ ಶೆಣೈ ಮತ್ತು ಅನಿರುದ್ಧ ಕಾಮತ್ , ಶ್ರೀ ವೆಂಕಟರಮಣ ಸ್ವಾಮೀ ಸಮೂಹ ಸಂಸ್ಥೆಗಳ ಸಂಚಾಲಕರಾದ ಕೆ. ರೇಖಾ ಶೆಣೈ, ಶಾಲಾ ಮುಖ್ಯಸ್ಥರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

RELATED ARTICLES
- Advertisment -
Google search engine

Most Popular