ಬನ್ನಂಜೆ ದೇವಳದ ಬ್ರಹ್ಮಕಲಶೋತ್ಸವಕ್ಕೆ ರಾಜ್ಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ರಿಗೆ ವಿಶೇಷ ಆಹ್ವಾನ

0
14

ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ತಾ. 16-4-2026ರಿಂದ ತಾ. 20-4-2026ರಿಂದ ನಡೆಯಲಿರುವ ಬ್ರಹ್ಮಕಲಶೋತ್ಸವ ಸೇರಿದಂತೆ ಹಲವು ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿರುವ ಸಂದರ್ಭದಲ್ಲಿ “ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವ ವೈಭವ-2026” ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯೊಂದಿಗೆ ದೇವಸ್ಥಾನದ ಪ್ರಸಾದವನ್ನು ಕರ್ನಾಟಕ ರಾಜ್ಯ ಸರ್ಕಾರದ ಗೌರವಾನ್ವಿತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್‌ರವರಿಗೆ ನೀಡಿ ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ‌ ಅಧ್ಯಕ್ಷರಾದ ಮಾಧವ ಪೂಜಾರಿ ಬನ್ನಂಜೆ, ಬ್ರಹ್ಮಕಲಶೋತ್ಸವ ಸಮಿತಿಯ ಸಂಚಾಲಕರಾದ ರಮೇಶ್ ಕಾಂಚನ್, ದೇವಸ್ಥಾನದ ಅರ್ಚಕರಾದ ಮಧುಸುಧನ್ ಉಪಾಧ್ಯಾಯ, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಸುದೇಶ್ ಶೇಟ್, ಪ್ರಭಾಕರ್ ಶೆಟ್ಟಿ, ರಾಜೇಶ್ ಬನ್ನಂಜೆ, ಶೇಖರ್ ಶೆಟ್ಟಿ, ವಿದ್ಯಾಲತಾ ಯು ಶೆಟ್ಟಿ, ಶಮಿತಾ ಎಸ್ ಭಂಡಾರಿ, ಮೀನಾಕ್ಷಿ ಮಾಧವ ಬನ್ನಂಜೆ ಅವರು ಉಪಸ್ಥಿತರಿದ್ದರು.

ವರದಿ ವಿನೋದ್ ಶೆಟ್ಟಿ ಉಡುಪಿ

LEAVE A REPLY

Please enter your comment!
Please enter your name here