ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನರಿಕೊಂಬುವಿನಲ್ಲಿ ಮಕ್ಕಳ ಪೋಷಕರ ವಿಶೇಷ ಸಭೆ

0
25

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಿಹಿರಿಯ ಪ್ರಾಥಮಿಕ ಶಾಲೆ ನರಿಕೊಂಬು ಇಲ್ಲಿ ಮಕ್ಕಳ ಪೋಷಕರ ವಿಶೇಷ ಸಭೆಯು ಮಾರ್ಚ್ರಿಯ ಪ್ರಾಥಮಿಕ ಶಾಲೆ ನರಿಕೊಂಬು ಇಲ್ಲಿ ಮಕ್ಕಳ ಪೋಷಕರ ವಿಶೇಷ ಸಭೆಯು ಮಾರ್ಚ್ 7 ರಂದು ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ದಿ ಸಮಿತಿಯ ಅಧ್ಯಕ್ಷರಾದ ರವಿ ಅಂಚನ್ ವಹಿಸಿದ್ದರು. ಸಭೆಯಲ್ಲಿ ಮಕ್ಕಳ ಸಂರಕ್ಷಣೆ ಹಾಗೂ ಸುರಕ್ಷತಾ ಕ್ರಮಗಳ ಬಗ್ಗೆ ಪೋಷಕರಿಗೆ ಮಾಹಿತಿಯನ್ನು ನೀಡಲಾಯಿತು.

ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಬಂಟ್ವಾಳ ನಗರ ಠಾಣೆಯ ಎಎಸ್‌ಐ ರವೀಂದ್ರ ಅವರು ಭಾಗವಹಿಸಿ ಮಕ್ಕಳ ಸುರಕ್ಷತೆ, ಕಾನೂನು ಅರಿವು ಮತ್ತು ಜಾಗೃತಿ ಕುರಿತು ಉಪನ್ಯಾಸ ನೀಡಿದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಪ್ರಯುಕ್ತ ಜರಗಿದ ವಿಜ್ಞಾನ ಪ್ರಯೋಗ ಸ್ಪರ್ಧೆಯ ವಿಜೇತರನ್ನು ಅಭಿನಂದಿಸಲಾಯಿತು.

ಕಾರ್ಯಕ್ರಮದ ವೇದಿಕೆಯಲ್ಲಿ ತಾಯಂದಿರ ಸಮಿತಿಯ ಉಪಾಧ್ಯಕ್ಷೆ ರೇಖಾ, ಶಿಕ್ಷಕಿ ಪ್ರವೀಣ, ದೈಹಿಕ ಶಿಕ್ಷಕಿ ಶೋಭಾ ಉಪಸ್ಥಿತರಿದ್ದರು. ಶಿಕ್ಷಕಿ ಪ್ರವೀಣ ಕುಮಾರಿ ಸ್ವಾಗತಿಸಿ, ಶಿಕ್ಷಕಿ ವಿಲ್ಮಾ ಪ್ರಸಿಲ್ಲ ಪಿಂಟೋ ವಂದಿಸಿದರು. ಶಿಕ್ಷಕಿ ದೀಪಿಕಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here