ಉಜಿರೆ : ಬೆಳ್ತಂಗಡಿ ಜೈನಪೇಟೆಯಲ್ಲಿರುವ ರತ್ನತ್ರಯ ಜೈನತೀರ್ಥಕ್ಷೇತ್ರದಲ್ಲಿ ಶ್ರಾವಣ ಶುಕ್ರವಾರದ ವಿಶೇಷ ಪೂಜೆಗಳು ಆ. 21 ಮತ್ತು 28 ಹಾಗೂ ಸೆ. 4 ಮತ್ತು 11 ರಂದು ನಡೆಯಲಿವೆ ಎಂದು ಬಸದಿಯ ಅನುವಂಶಿಕ ಆಡಳಿತ ಮೊಕ್ತೇಸರ ಕೆ. ಜಯವರ್ಮರಾಜ ಬಳ್ಳಾಲ್ ತಿಳಿಸಿದ್ದಾರೆ.
ಪ್ರತಿ ಶುಕ್ರವಾರ ಪೂರ್ವಾಹ್ನ 8 ಗಂಟೆಯಿAದ ಅಷ್ಟವಿಧಾರ್ಚನೆ ಪೂಜೆ ನಡೆಯಲಿದೆ. ಬಳಿಕ ಮಹಾಮಾತೆ ಪದ್ಮಾವತಿ ದೇವಿಗೆ ಸಹಸ್ರನಾಮ ಕುಂಕುಮಾರ್ಚನೆ ನಡೆಯಲಿದೆ.
