ಕಲ್ಯಾಣಪುರ ಗ್ರಾಮ ಪಂಚಾಯತ್ ನಿಡಂಬಳ್ಳಿಯಲ್ಲಿ ಸುಮಾರು 65 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಆಯುಷ್ಮಾನ್ ಆರೋಗ್ಯ ಕೇಂದ್ರದ ಉದ್ಘಾಟನೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ ಉದ್ಘಾಟಿಸಿದರು.
ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಗ್ರಾಮೀಣ ಭಾಗದ ಜನತೆಯ ಆರೋಗ್ಯ ಸೇವೆಗೆ ವಿಶೇಷ ಆದ್ಯತೆ ನೀಡುತ್ತಿದ್ದು, ನಿಡಂಬಳ್ಳಿಯಲ್ಲಿ ಉದ್ಘಾಟನೆಗೊಂಡ ಆಯುಷ್ಮಾನ್ ಆರೋಗ್ಯ ಕೇಂದ್ರದ ಮೂಲಕ ಸ್ಥಳೀಯ ಜನತೆಗೆ ಉತ್ತಮ ಸೇವೆಯ ಜೊತೆಗೆ ಉತ್ತಮ ಆರೋಗ್ಯವಂತ ಸಮಾಜದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವಾಗಲಿ ಎಂದರು.
ಸಮಾರಂಭದಲ್ಲಿ ಉಪಸ್ಥಿತರಿದ್ದ ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಎಂ. ಎ. ಗಫೂರ್ ಆರೋಗ್ಯ ಕ್ಷೇತ್ರದ ಸರ್ಕಾರದ ಯೋಜನೆ, ಸೇವೆಗಳು ಆಯುಷ್ಮಾನ್ ಆರೋಗ್ಯ ಕೇಂದ್ರದ ಮೂಲಕ ಸಾರ್ವಜನಿಕರಿಗೆ ಸಿಗುವಂತಾಗಲಿ ಎಂದರು.
ಸಮಾರಂಭದಲ್ಲಿ ತಾಲೂಕು ಆರೋಗ್ಯ ಅಧಿಕಾರಿ ಡಾ. ವಾಸುದೇವ, ವೈದ್ಯರಾದ ಡಾ. ಅಕ್ಷತಾ, ಇಲಾಖೆಯ ಇಂಜಿನಿಯರ್ ಗುರು ಪ್ರಸಾದ್, ಕಲ್ಯಾಣಪುರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ನಾಗರಾಜ್ ಕುಂದರ್, ಸತೀಶ್ ನಾಯ್ಕ್, ಕೃಷ್ಣ ದೇವಾಡಿಗ, ಬಡಾನಿಡಿಯೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಉಮೇಶ್ ಪೂಜಾರಿ, ಪ್ರಭಾಕರ ತಿಂಗಳಾಯ, ಉಡುಪಿ ನಗರಸಭೆ ಮಾಜಿ ಅಧ್ಯಕ್ಷರಾದ ಪ್ರಭಾಕರ ಪೂಜಾರಿ, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಪ್ರೇಮಲತಾ, ನವೀನ್ ಕಾಂಚನ್, ಜಾನ್ಸನ್ , ಪ್ರಶಾಂತ್ ಆಚಾರ್ಯ, ಅನಿತಾ ನಾಯ್ಕ್ , ಪ್ರಮುಖರಾದ ಸುಧೀರ್ ಕಲ್ಯಾಣಪುರ, ಆಶಾ ಕಾರ್ಯಕರ್ತೆಯರು, ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಉಪಸ್ಥಿತರಿದ್ದರು.

