ರೇಡಿಯೋ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದಲ್ಲಿ ಗ್ರಾಮಸ್ಥರ ಅಪೇಕ್ಷೆ ಮೇರೆಗೆ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಹಾಗೂ ಶ್ರೀ ಮಹಿಷಮರ್ದಿನಿ ಅಮ್ಮನವರ ಸನ್ನಿಧಿ- ಪರ್ಕಳ ಕುರಿತು ವಿಶೇಷ ಕಾರ್ಯಕ್ರಮ ಪ್ರಸಾರವಾಗಲಿದೆ.ಈ ಕಾರ್ಯಕ್ರಮದಲ್ಲಿ ಶ್ರೀನಿವಾಸ ಉಪಾಧ್ಯ,ಮುರಳೀಧರ ನಕ್ಷತ್ರಿಮತ್ತು ದಿನೇಶ್ ಹೆಗ್ಡೆ ಆತ್ರಾಡಿ ಭಾಗವಹಿಸಲಿದ್ದಾರೆ.
ಇದು ಮಾರ್ಚ್ 20 ಗುರುವಾರ ಸಂಜೆ 6.30 ಕ್ಕೆ ಪ್ರಸಾರವಾಗಲಿದೆ ಮತ್ತು ಮಾರ್ಚ್ 21 ರಂದು ಮಧ್ಯಾಹ್ನ 2.30ಕ್ಕೆ ಮರುಪ್ರಸಾರವಾಗಲಿದೆ. ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal
ಮತ್ತು ಐಫೋನ್ ನ https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು ಮಣಿಪಾಲ ಮಾಹೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.