ಕಾಶ್ಮೀರದ ಪಹಲ್ಗಾಮ್ ನಲ್ಲಿ 26 ಅಮಾಯಕ ಹಿಂದೂಗಳ ಮಾರಣಹೋಮಗೈದ ಉಗ್ರರ ಸಂಹಾರಕ್ಕೆ ‘ಆಪರೇಶನ್ ಸಿಂಧೂರ್’ ಕಾರ್ಯಾಚರಣೆಯನ್ನು ನಡೆಸಿ ಉಗ್ರರನ್ನು ಪೋಷಿಸುವ ದುಷ್ಟ ಪಾಕಿಸ್ತಾನದ ಒಳಗೆ ನುಗ್ಗಿ ಉಗ್ರರನ್ನು ಸದೆ ಬಡಿದ ಭಾರತೀಯ ವೀರ ಯೋಧರ ಹಾಗೂ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ತಂಡದ ಶ್ರೇಯಸ್ಸಿಗಾಗಿ, ಸಮಸ್ತ ಭಾರತೀಯರ ನೆಮ್ಮದಿಯ ಬದುಕಿಗಾಗಿ ಪ್ರಾರ್ಥಿಸಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಉಡುಪಿಯ ಜಗದ್ಗುರು ಶ್ರೀ ನಿತ್ಯಾನಂದ ಮಂದಿರದಲ್ಲಿ ವಿಶೇಷ ಪೂಜೆಯನ್ನು ಆಯೋಜಿಸಲಾಯಿತು.
ಪೂಜೆಯಲ್ಲಿ ಭಾಗವಹಿಸಿದ ಎಲ್ಲಾ ಮಾತಾ ಭಗಿನಿಯರಿಗೆ ಅರಿಶಿನ ಕುಂಕುಮವನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ನಳಿನಿ ಪ್ರದೀಪ್ ರಾವ್, ಉಪಾಧ್ಯಕ್ಷೆ ಸುಜಾಲಾ ಸತೀಶ್, ಉಡುಪಿ ನಗರ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಸರೋಜಾ ಶೆಣೈ, ಶಾಂತಿ ಮನೋಜ್ ಹಾಗೂ ಮಹಿಳಾ ಮೋರ್ಚಾ ಜಿಲ್ಲಾ ಮತ್ತು ಮಂಡಲ ಪದಾಧಿಕಾರಿಗಳು ಉಪಸ್ಥಿತರಿದ್ದರು.