ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವರಿಗೆ ವಿಶೇಷ ಪೂಜೆ

0
7

ಬೆಳಾಲು ಗ್ರಾಮದ ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವರಿಗೆ ಪಂಚಾಮೃತ ಅಭಿಷೇಕ,ಪವಮಾನ ಕಲಶಾಭಿಷೇಕ ಪೂಜೆ,ಊರ ಪರವೂರ ಋತ್ವಿಜರಿಂದ ಲಕ್ಷ ತುಳಸಿ ಅರ್ಚನೆ ಹಾಗೂ ತೆನೆ ಪೂಜೆ

ಬೆಳಾಲು : ಸೆ 25 ಬೆಳಾಲು ಗ್ರಾಮದ ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವರಿಗೆ ಪಂಚಾಮೃತ ಅಭಿಷೇಕ, ಪವಮಾನ ಕಲಶಾಭಿಷೇಕ, ಕಲ್ಪೋಕ್ತ ಪೂಜೆ ನಡೆಸಲಾಯಿತು.ಊರ ಪರವೂರ ಋತ್ವಿಜರಿಂದ ಲಕ್ಷ ತುಳಸಿ ಅರ್ಚನೆ ನಡೆಸಲಾಯಿತು. ಮಧ್ಯಾಹ್ನ ತುಳುನಾಡಿನ ಮಣ್ಣಿನ ತೆನೆ ಕಟ್ಟುವ ಪೂಜೆ ನಡೆಸಿ ಬಂದ ಭಕ್ತಾದಿಗಳಿಗೆ ವಿತರಿಸಲಾಯಿತು.

ದೇವರಿಗೆ ಮಹಾಪೂಜೆ, ಪ್ರಸಾದ ವಿತರಣೆ ನಡೆದು ಸಮಸ್ತ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನಡೆಯಿತು. ಅಸ್ರಣ್ಣರು, ಅರ್ಚಕರು, ವಿವಿಧ ಸಮಿತಿ ಅಧ್ಯಕ್ಷರು,ಪದಾಧಿಕಾರಿಗಳು,ಸದಸ್ಯರುಗಳು, ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.