ಉಡುಪಿಯಲ್ಲಿ ಮೋದಿ ದೀರ್ಘಾಯುಷ್ಯಕ್ಕಾಗಿ ವಿಶೇಷ ಪೂಜೆ – ಶೀರೂರು ಮಠದಲ್ಲಿ ಪ್ರಾರ್ಥನೆ

0
8

ಉಡುಪಿ : ದಾಖಲೆಯ 4339‌ನೇ ದಿನವನ್ನು ಪೂರೈಸಿದ, ಸತತವಾಗಿ 12 ವರ್ಷಗಳು ಧಿರ್ಘಾವಧಿ ಭಾರತದ ಪ್ರಧಾನ ಸೇವಕರಾಗಿ ಸೇವೆ ಸಲ್ಲಿಸಿದ ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರ ದಾಮೋದರ ದಾಸ್ ಮೋದಿಯವರಿಗೆ ದೀರ್ಘಾಯುಷ್ಯ ಕೋರಿ ಹಾಗೂ 2047ರ ವಿಕಸಿತ ಭಾರತದ ಸಂಕಲ್ಪ ಸಾಧನೆ ಯ‌‌ ಯಶಸ್ಸನ್ನು ಕೋರಿ ‌ಇಂದು ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ಸನ್ನಿಧಿಯಲ್ಲಿ ಪರ್ಯಾಯ ಶ್ರೀ ಶೀರೂರು ಶ್ರೀ ಕೃಷ್ಣ ಮಠ ದ ಶ್ರೀ ಶ್ರೀ ವೇದವರ್ಧನತೀರ್ಥ ಶ್ರೀ ಪಾದರಿಂದ ಹಾಗೂ ಭಾರತೀಯ ಜನತಾಪಕ್ಷ ಉಡುಪಿ ಜಿಲ್ಲೆ ವತಿಯಿಂದ ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಠ ದ ದಿವಾನರಾದ ಉದಯ ಕುಮಾರ್ ಸರಳತ್ತಾಯ.ಉಡುಪಿಯ ಜನಪ್ರಿಯ ಶಾಸಕರಾದ ಯಶ್ ಪಾಲ್ ಸುವರ್ಣ, ಜಿಲ್ಲಾಧ್ಯಕ್ಷ ಶ್ರೀ ಕುತ್ಯಾರು ನವೀನ್,ಪ್ರ.ಕಾರ್ಯದರ್ಷಿಗಳಾದ ಶ್ರೀಕಾಂತ್ ನಾಯಕ್, ದಿನಕರಶೆಟ್ಟಿ, ಜಿಲ್ಲಾ ವಕ್ತಾರ ಮಧುಕರ ಮುದ್ರಾಡಿ, ಸುಪ್ರಸಾದ್ ಶೆಟ್ಟಿ, ಮಹಿಳಾ ಮೋರ್ಚಾದ ಸಂಧ್ಯಾ ರಮೇಶ್,ನಯನಾ ಗಣೇಶ್, ವೀಣಾ ಶೆಟ್ಟಿ, ಪ್ರಜ್ಞಾ ಶೆಟ್ಟಿ, ಪದ್ಮಾ ರತ್ನಾಕರ್, ಶ್ರೀ ಅಜಿತ್ ಪೈ, ಶಾಮ್ ಪ್ರಸಾದ್ ಕುಡ್ವ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here