
ಕಲ್ಲಡ್ಕ ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ನಡೆದ ದೇಶ ರಕ್ಷಕರೊಂದಿಗೆ ರಕ್ಷಾಬಂಧನ ವಿಶೇಷ ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಬಂಟ್ವಾಳ ತಾಲೂಕು ಅಧ್ಯಕ್ಷ ಮೋನಪ್ಪ ಪೂಜಾರಿ ಸುಮತಿ ದಂಪತಿಗಳನ್ನು ಗೌರವಿಸಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದ ಸಂಸ್ಥಾಪಕ ಡಾಕ್ಟರ್ ಪ್ರಭಾಕರ್ ಭಟ್, ರಾಷ್ಟ್ರ ಸೇವಿಕಾ ಸಮಿತಿಯ ಡಾಕ್ಟರ್ ಕಮಲ ಪ್ರಭಾಕರ್ ಭಟ್, ಶ್ರೀರಾಮ ವಿದ್ಯಾ ಕೇಂದ್ರದ ಸಂಚಾಲಕ ವಸಂತ ಮಾಧವ, ಮುಖ್ಯ ಕಾರ್ಯನಿರ್ವಾಣಾಧಿಕಾರಿ ಕೃಷ್ಣಪ್ರಸಾದ್ ಕಾಯರ್ ಕಟ್ಟೆ. ರವಿರಾಜ್ ಕಣಂತೂರು,, ಸುಮಂತ್ ಆಳ್ವ ಮೊದಲಾದವರು ಉಪಸ್ಥಿತರಿದ್ದರು.
