Friday, May 16, 2025
HomeUncategorizedಸಂಸದ ಕ್ಯಾ. ಬ್ರಿಜೇಶ್‌ ಚೌಟ ಮನವಿಗೆ ಸ್ಪಂದನೆ | ಭಾರೀ ಮಳೆಯ ಹಿನ್ನೆಲೆಯಲ್ಲಿ ಬೆಂಗಳೂರು-ಮಂಗಳೂರು ನಡುವೆ...

ಸಂಸದ ಕ್ಯಾ. ಬ್ರಿಜೇಶ್‌ ಚೌಟ ಮನವಿಗೆ ಸ್ಪಂದನೆ | ಭಾರೀ ಮಳೆಯ ಹಿನ್ನೆಲೆಯಲ್ಲಿ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಮಂಗಳೂರು: ಕಳೆದ ಎರಡು ವಾರಗಳಿಂದ ಸತತ ಮಳೆ ಸುರಿಯುತ್ತಿರುವುದರಿಂದ ಘಾಟಿ ಪ್ರದೇಶದಲ್ಲಿ ಭೂ ಕುಸಿತವಾಗಿ ತುಳುನಾಡು-ಮಲೆನಾಡು ಮತ್ತು ಮೈಸೂರು, ಬೆಂಗಳೂರು ಸಂಪರ್ಕಕ್ಕೆ ಕಷ್ಟ ಸಾಧ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು-ಬೆಂಗಳೂರು ನಡುವೆ ವಿಶೇಷ ರೈಲು ಸೇವೆ ಆರಂಭಿಸುವಂತೆ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಮನವಿಗೆ ಸೂಕ್ತ ಸ್ಪಂದನೆ ಸಿಕ್ಕಿದೆ. ವಿಶೇಷ ರೈಲು ಬಿಡುವಂತೆ ನೈರುತ್ಯ ರೈಲ್ವೆ ವಲಯದ ಅಧಿಕಾರಿಗಳಿಗೆ ಸಂಸದ ಕ್ಯಾ. ಚೌಟ ಪತ್ರ ಬರೆದಿದ್ದರು. ಅದರಂತೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು ಓಡಿಸಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ.
ಬೆಂಗಳೂರು ಹಾಗೂ ಮಂಗಳೂರಿನಿಂದ ಜು. 22ರವರೆಗೆ ಪ್ರಯಾಣಿಸಲಿರುವ ವಿಶೇಷ ರೈಲುಗಳ ವಿವರ ಹೀಗಿದೆ:

  • ಜು. 19ರಂದು ರೈಲು ಸಂಖ್ಯೆ 06547 ಎಸ್‌ಸಿಬಿ ಬೆಂಗಳೂರಿನಿಂದ ಹೊರಡಲಿದೆ.
  • ಜು. 20ರಂದು ರೈಲು ಸಂಖ್ಯೆ 06548 ಮಂಗಳೂರು ಜಂಕ್ಷನ್‌ನಿಂದ ಯಶವಂತಪುರಕ್ಕೆ ತೆರಳಲಿದೆ.
  • ಜು. 21 ಮತ್ತು 22ರಂದು ರೈಲು ಸಂಖ್ಯೆ 06549 ಯಶವಂತಪುರದಿಂದ ಮಂಗಳೂರು ಜಂಕ್ಷನ್‌ಗೆ ಬರಲಿದೆ
  • ಜು. 21 ಮತ್ತು 22ರಂದು ರೈಲು ಸಂಖ್ಯೆ 06550 ಮಂಗಳೂರು ಜಂಕ್ಷನ್‌ನಿಂದ ಯಶವಂತಪುರಕ್ಕೆ ತೆರಳಲಿವೆ.
RELATED ARTICLES
- Advertisment -
Google search engine

Most Popular