ಮತದಾರ ಪಟ್ಟಿ ತೀವ್ರ ಪರಿಷ್ಕರಣೆಯ ವಿಶೇಷ ಕಾರ್ಯಾಗಾರ

0
24

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ನಾರಾವಿ, ಅಳದಂಗಡಿ, ಕುವೆಟ್ಟು, ಕಣಿಯೂರು, ನಗರ, ಲಾಯಿಲ ಹಾಗೂ ಉಜಿರೆ ಮಹಾಶಕ್ತಿ ಕೇಂದ್ರಗಳಲ್ಲಿ ಮತದಾರ ಪಟ್ಟಿ ತೀವ್ರ ಪರಿಷ್ಕರಣೆಯ ವಿಶೇಷ ಕಾರ್ಯಾಗಾರವನ್ನು ನಡೆಸಲಾಯಿತು. ಕಾರ್ಯಾಗಾರವನ್ನು ಶಾಸಕರಾದ ಹರೀಶ್ ಪೂಂಜರವರು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಬಿಜೆಪಿ ಶಿವಮೊಗ್ಗ ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಮೇಘರಾಜ್ ಹಾಗೂ ದ.ಕ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿಯವರು ಮಾಹಿತಿಯನ್ನು ನೀಡಿದರು. ಕಾರ್ಯಾಗಾರದಲ್ಲಿ ಮಂಡಲ ಅಧ್ಯಕ್ಷರಾದ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಎಂ ಪಾರೆಂಕಿ, ಜಯಾನಂದ ಗೌಡ, ಜಿಲ್ಲಾ ಕಾರ್ಯದರ್ಶಿಗಳಾದ ಸೀತಾರಾಮ ಬಿ.ಎಸ್, ವಸಂತಿ ಮಚ್ಚಿನ, ಎಲ್ಲಾ ಮಹಾಶಕ್ತಿ ಕೇಂದ್ರಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಬೂತ್ ಸಮಿತಿ ಅಧ್ಯಕ್ಷರುಗಳು, ಶಕ್ತಿಕೇಂದ್ರ ಅಧ್ಯಕ್ಷರುಗಳು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here