ಕ್ರೀಡಾಪಟು, ಸಾಮಾಜಿಕ ಸೇವೆ, ಧಾರ್ಮಿಕ ಸೇವಾ ನಿರತರಾದ ಕೆ. ಜಿ. ನಿರಂಜನ ನಾಗರಕಟ್ಟೆಗೆ ಕನ್ನಡ ಭವನದ “ಕನ್ನಡ ಪಯಸ್ವಿನಿ ಪ್ರಶಸ್ತಿ “2026ಕ್ಕೆ ಆಯ್ಕೆ

0
29

ಕಾಸರಗೋಡು : ಡಾ. ವಾಮನ್ ರಾವ್ ಬೇಕಲ್ ಸ್ಥಾಪಕ ಅಧ್ಯಕ್ಷರಾಗಿರುವ “ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ (ರಿ. 223/2008)ಇದರ ಅಂಗ ಸಂಸ್ಥೆಯಾದ ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ವರ್ಷಾಚರಣೆ ಅಂಗವಾಗಿ ಕಾಸರಗೋಡು ನುಳ್ಳಿಪ್ಪಾಡಿಯ ಕನ್ನಡ ಭವನ ಬಯಲು ರಂಗ ಮಂಟಪದ “ಚುಟುಕು ಯುಗಾಚಾರ್ಯ ಎಂ. ಜಿ. ಆರ್ ಅರಸ್ “ವೇದಿಕೆಯಲ್ಲಿ 22-02-2026ರಂದು, ನಾಡೋಜ ಡಾ. ನೇತ್ರಾಲಯ ಕೃಷ್ಣ ಪ್ರಸಾದ್ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿರುವ ಕಾಸರಗೋಡು -ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನದಲ್ಲಿ, ಕನ್ನಡ ಭವನದ ಪ್ರತಿಷ್ಠಿತ ಅಂತಾರಾಜ್ಯ ಪ್ರಶಸ್ತಿಯಾದ “ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ 2026.ನೀಡಿ ಗೌರವಿಸಲಾಗುವುದು, ಎಂದು ಕನ್ನಡ ಭವನ, ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಸಂಸ್ಥಾಪಕರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷರಾದ ಡಾ. ವೆಂಕಟ್ರಮಣ ಹೊಳ್ಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here