ಶ್ರೀ ಅನಂತ ಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಇದರ ವಾರ್ಷಿಕ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ

0
54

ಇದೇ ಬರುವ ಡಿಸೆಂಬರ್ 24 ,25 ರಂದು ಶ್ರೀ ಅನಂತಪದ್ಮನಾಭ ದೇವಸ್ಥಾನ ಇದರ ವಾರ್ಷಿಕ ಜಾತ್ರೆ ಹಾಗೂ ಪರಿವಾರದ ದೈವಗಳ ನರ್ತನ ಸೇವೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು ಈ ಬಗ್ಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ಸಭೆಯ ಅಧ್ಯಕ್ಷತೆಯನ್ನು ಜಾತ್ರಾ ಸಮಿತಿಯ ಪ್ರಧಾನ ಸಂಚಾಲಕರಾದ ಲಿಂಗಪ್ಪ ಪೂಜಾರಿ ಬನಂದೂರುರವರು ವಹಿಸಿ, ಸಭೆಯಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಶ್ರೀ ಶ್ರೀನಿವಾಸ ಗೌಡ ನೋಟರಿ ವಕೀಲರು, ಕ್ಷೇತ್ರದ ಅಸ್ರಣ್ಣರಾದ ಗಿರೀಶ್ ಬಾರಿತ್ತಾಯ ಪಾರಲ, ಸಮಿತಿಯ ಪ್ರಧಾನ ಕಾರ್ಯದರ್ಶಿಯಾದ ದುರ್ಗ ಪ್ರಸಾದ್ ಕೆರ್ಮುಣ್ಣಾಯ ,ಮಹಿಳಾ ಸಮಿತಿಯ ಅಧ್ಯಕ್ಷರಾದ ಹೇಮಲತಾ ಶ್ರೀನಿವಾಸ್ ಗೌಡ ,ಭಜನ ಮಂಡಳಿಯ ಅಧ್ಯಕ್ಷರಾದ ಹರೀಶ್ ಪೋಸಟ್ಟು, ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿದ್ಯಾ ಶ್ರೀನಿವಾಸ್ ಗೌಡ, ಆರ್ಥಿಕ ಸಮಿತಿಯ ಸಂಚಾಲಕರಾದ ಶಿವಕುಮಾರ್ ಬಾರಿತ್ತಾಯ, ಸಿಂಧೂರ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾದ ನಿಶಾ ಬನಂದೂರು, ವ್ಯವಸ್ಥಾಪನ ಸಮಿತಿಯ ಸದಸ್ಯರು, ಬೈಲುವಾರು ಸಮಿತಿಯ ಪ್ರಧಾನ ಸಂಚಾಲಕರು ಹಾಗೂ ಸಂಚಾಲಕರು, ಮಹಿಳಾ ಸಮಿತಿಯ ಸದಸ್ಯರು ಭಜನಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ವಕೀಲರ ಸಂಘ ಬೆಳ್ತಂಗಡಿ ಇದರ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಶ್ರೀನಿವಾಸ್ ಗೌಡ ಇವರನ್ನು ಕ್ಷೇತ್ರದ ವತಿಯಿಂದ ಗೌರವಿಸಲಾಯಿತು.

ಸಮಿತಿಯ ಕಾರ್ಯದರ್ಶಿಯಾದ ಸತೀಶ್ ಗೌಡ ಎಳ್ಳುಗದ್ದೆ ಸ್ವಾಗತಿಸಿ, ದೇವಸ್ಥಾನದ ಮ್ಯಾನೇಜರ್ ಶಿವಪ್ರಸಾದ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

LEAVE A REPLY

Please enter your comment!
Please enter your name here