ಮಂಗಳೂರು , ಶ್ರೀ ಗೋಕರ್ಣಾಥೇಶ್ವರ ಕಾಲೇಜು, ಗಾಂಧಿನಗರ, ಮಂಗಳೂರು ಇವರ ವಿದ್ಯಾರ್ಥಿಗಳಿಂದ ರಾಷ್ಟ್ರೀಯ ಸೇವಾ ಯೋಜನೆಯಡಿಯಲ್ಲಿ ಗಿರಿಜಾ ಚಾರಿಟೇಬಲ್ ಟ್ರಸ್ಟ್ (ರಿ.) ಮಂಗಳೂರು ಇವರ ಸಹಯೋಗದೊಂದಿಗೆ ಕಾಲೇಜು ಪ್ರಾಂಗಣದಲ್ಲಿ ಗಿಡ ನೆಡುವ ಕಾರ್ಯಕ್ರಮ ಜರಗಿತು. ಟ್ರಸ್ಟಿನ ಅಧ್ಯಕ್ಷರಾದ ಶ್ರೀ CA ಲೋಕೇಶ್ ಪುತ್ರನ್ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಬದಲಾಗಿರುವ ಪ್ರಸಕ್ತ ಕಾಲ ಘಟ್ಟದಲ್ಲಿ “ಹಸಿರು ಕ್ರಾಂತಿ”ಯ ಮಹತ್ವವನ್ನು ವಿವರಿಸಿದರು.