ಮಂಗಳೂರು : ಶ್ರೀ ಶ್ರೀ ಕೃಷ್ಣ ಬಲರಾಮ ಮಂದಿರ, ಇಸ್ಕಾನ್ ಮಂಗಳೂರು ವತಿಯಿಂದ ಆಳ್ವಾಸ್ ಎಜುಕೇಶನ್ ಫೌಂಡೇಶನ್ ಸಹಭಾಗಿತ್ವದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಮಹೋತ್ಸವ–2026ವನ್ನು ಸೆಪ್ಟೆಂಬರ್ 3 ಮತ್ತು 4ರಂದು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಯೋಜಿಸಲಾಗಿದೆ.
ಎರಡು ದಿನಗಳ ಕಾಲ ನಡೆಯಲಿರುವ ಮಹೋತ್ಸವದಲ್ಲಿ ಶ್ರೀ ಶ್ರೀ ಕೃಷ್ಣ ಬಲರಾಮರ ಮಂಗಳಾರತಿ, ಶೃಂಗಾರಾರತಿ, ಪುಷ್ಪಾಂಜಲಿ ಸೇವೆ, ತೊಟ್ಟಿಲು ಸೇವೆ, ಅಭಿಷೇಕ, ಹೋಮ, ಭಜನಾ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಮಹಾ ಮಂಗಳಾರತಿಯಂತಹ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.
ಸೆ.3ರಂದು ಕಾರ್ಯಕ್ರಮಗಳ ಸರಣಿ
ಸೆಪ್ಟೆಂಬರ್ 3ರಂದು ಬೆಳಿಗ್ಗೆ 4.30ಕ್ಕೆ ಶ್ರೀ ಶ್ರೀ ಕೃಷ್ಣ ಬಲರಾಮರ ಮಂಗಳಾರತಿ, ಬೆಳಿಗ್ಗೆ 7.30ಕ್ಕೆ ಶೃಂಗಾರಾರತಿ ನಡೆಯಲಿದೆ. ಬೆಳಿಗ್ಗೆ 9 ಗಂಟೆಗೆ ಪುಷ್ಪಾಂಜಲಿ ಸೇವೆ ಮತ್ತು ತೊಟ್ಟಿಲು ಸೇವೆಯ ಉದ್ಘಾಟನೆ ನೆರವೇರಲಿದೆ.
ಬೆಳಿಗ್ಗೆ 10.30ರಿಂದ ಮಧ್ಯಾಹ್ನ 12ರವರೆಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಮಧ್ಯಾಹ್ನ 12ರಿಂದ 1ರವರೆಗೆ ಶ್ರೀ ಕೃಷ್ಣ ಜನ್ಮಾಷ್ಟಮಿ ಅಭಿಷೇಕ ನಡೆಯಲಿದೆ. ಮಧ್ಯಾಹ್ನ 1.30ರಿಂದ ಸಂಜೆ 4ರವರೆಗೆ ಅಂತಾರಾಷ್ಟ್ರೀಯ ಭಜನಾ ಕ್ಲಬ್ಬಿಂಗ್ ಕಾರ್ಯಕ್ರಮ ಆಯೋಜಿಸಲಾಗಿದೆ.
ಸಂಜೆ 5ರಿಂದ 7ರವರೆಗೆ ‘ಶ್ರೀ ಕೃಷ್ಣ ವೈಭವ’ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಸಂಜೆ 7ರಿಂದ ರಾತ್ರಿ 8.30ರವರೆಗೆ ಶ್ರೀ ಶ್ರೀ ಕೃಷ್ಣ ಬಲರಾಮರ ಅಭಿಷೇಕ ನಡೆಯಲಿದೆ. ರಾತ್ರಿ 9 ಗಂಟೆಗೆ ಮೊದಲ ದಿನದ ಕಾರ್ಯಕ್ರಮಗಳು ಸಮಾಪ್ತಿಗೊಳ್ಳಲಿವೆ.
ಸೆ.4ರಂದು ಜನ್ಮಾಷ್ಟಮಿ ಸಂಭ್ರಮ
ಸೆಪ್ಟೆಂಬರ್ 4ರಂದು ಬೆಳಿಗ್ಗೆ 4.30ಕ್ಕೆ ಮಂಗಳಾರತಿ ಹಾಗೂ 7.30ಕ್ಕೆ ಶೃಂಗಾರಾರತಿ ನಡೆಯಲಿದೆ. ಬೆಳಿಗ್ಗೆ 9 ಗಂಟೆಗೆ ಪುಷ್ಪಾಂಜಲಿ ಸೇವೆ ಮತ್ತು ತೊಟ್ಟಿಲು ಸೇವೆಯ ಉದ್ಘಾಟನೆ ನಡೆಯಲಿದ್ದು, ಬೆಳಿಗ್ಗೆ 9ರಿಂದ 10ರವರೆಗೆ ಶ್ರೀ ಕೃಷ್ಣ ಜನ್ಮಾಷ್ಟಮಿ ಹೋಮ ನೆರವೇರಲಿದೆ.
ಬೆಳಿಗ್ಗೆ 10.30ರಿಂದ ಮಧ್ಯಾಹ್ನ 12ರವರೆಗೆ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಮಧ್ಯಾಹ್ನ 1.30ರಿಂದ ಸಂಜೆ 4ರವರೆಗೆ ಅಂತಾರಾಷ್ಟ್ರೀಯ ಭಜನಾ ಕ್ಲಬ್ಬಿಂಗ್ ನಡೆಯಲಿದೆ.
ಸಂಜೆ 6ರಿಂದ ರಾತ್ರಿ 9ರವರೆಗೆ ‘ಶ್ರೀ ಕೃಷ್ಣ ವೈಭವ’ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ರಾತ್ರಿ 9ರಿಂದ 10ರವರೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು, ರಾತ್ರಿ 10ರಿಂದ 11.55ರವರೆಗೆ ಶ್ರೀ ಕೃಷ್ಣ ಭವ್ಯ ಮಹಾ ಅಭಿಷೇಕ ನಡೆಯಲಿದೆ.
ರಾತ್ರಿ 12 ಗಂಟೆಗೆ ಮಹಾ ಮಂಗಳಾರತಿ ನೆರವೇರಲಿದ್ದು, 12.30ಕ್ಕೆ ಶ್ರೀ ಕೃಷ್ಣ ಜನ್ಮಾಷ್ಟಮಿ ಮಹೋತ್ಸವ–2026ರ ಭವ್ಯ ಸಮಾಪನ ನಡೆಯಲಿದೆ.
ಎರಡು ದಿನಗಳ ಕಾಲ ನಡೆಯಲಿರುವ ಈ ಭವ್ಯ ಧಾರ್ಮಿಕ ಮಹೋತ್ಸವದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ಕೃಷ್ಣನ ದರ್ಶನ ಪಡೆದು, ವಿವಿಧ ಸೇವೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತೆ ಆಯೋಜಕರು ಅಕ್ಕರೆಯ ಕರೆಯೋಲೆ ನೀಡಿದ್ದಾರೆ.

