ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು 418 ಶಾಲೆಗಳಿಗೆ 3,472 ಜೊತೆ ಡೆಸ್ಕ್-ಬೆಂಚ್‌ಗಳ ವಿತರಣೆಗೆ ಚಾಲನೆ ನೀಡಿ ಶುಭ ಹಾರೈಸಿದರು. ಜ್ಞಾನದೀಪ ಶಿಕ್ಷಣ ಕಾರ್ಯಕ್ರಮದಡಿಯಲ್ಲಿ ಶಾಲೆಗಳಿಗೆ ಮೂಲಭೂತ ಸೌಕರ್ಯಗಳ ಪೂರೈಕೆ.
ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನದೀಪ ಶಿಕ್ಷಣ ಕಾರ್ಯಕ್ರಮದಡಿಯಲ್ಲಿ ಶಾಲಾಕೊಠಡಿ, ಆಟದಮೈದಾನ, ಕುಡಿಯುವನೀರು, ಶೌಚಾಲಯ, ರಂಗಮಂದಿರ, ಬೋಧನಾ ಸಾಮಾಗ್ರಿಗಳ ವಿತರಣೆ ಇತ್ಯಾದಿ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಪ್ರೋತ್ಸಾಹ ನೀಡಲಾಗುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಇದಕ್ಕಾಗಿ ಈವರೆಗೆ 47.69 ಕೋಟಿ ರೂ. ವಿನಿಯೋಗಿಸಲಾಗಿದೆ.
ಅವರು ಧರ್ಮಸ್ಥಳದಲ್ಲಿ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಕೋಲಾರ ಜಿಲ್ಲೆಗಳ 418 ಶಾಲೆಗಳಿಗೆ 3,472 ಜೊತೆ ಡೆಸ್ಕ್-ಬೆಂಚ್‌ಗಳ ವಿತರಣೆಗೆ ಚಾಲನೆ ನೀಡಿ ಶುಭ ಹಾರೈಸಿದರು.
ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶಾಲೆಗಳಿಗೆ 1074 ಗೌರವ ಶಿಕ್ಷಕರನ್ನು ನೇಮಿಸಲಾಗಿದೆ. ರಾಜ್ಯದ 11,621 ಶಾಲೆಗಳಿಗೆ 75,518 ಜೊತೆ ಡೆಸ್ಕ್-ಬೆಂಚ್‌ಗಳನ್ನು ಈ ವರೆಗೆ ವಿತರಿಸಿದ್ದು ಇದಕ್ಕಾಗಿ 28.55 ಕೋಟಿ ರೂ. ವಿನಿಯೋಗಿಸಲಾಗಿದೆ ಎಂದು ಅವರು ತಿಳಿಸಿದರು. ಹೇಮಾವತಿ ವೀ. ಹೆಗ್ಗಡೆಯವರು, ಡಿ. ಸುರೇಂದ್ರ ಕುಮಾರ್, ಶ್ರದ್ಧಾಅಮಿತ್, ಅಮಿತ್, ಕುಮಾರಿ ಮಾನ್ಯ ಉಪಸ್ಥಿತರಿದ್ದರು. ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್‌ಕುಮಾರ್ ಸವಿವರ ಮಾಹಿತಿ ನೀಡಿದರು.

