ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಗ್ಗ ವಲಯದಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

0
45

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ ಇದರ ವಗ್ಗ ವಲಯದ ವತಿಯಿಂದ ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲಾ ವಿಭಾಗ ಕಾವಳಪಡೂರು ವಗ್ಗ ಇಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಜರಗಿತು.

ಸಂಪನ್ಮೂಲ ವ್ಯಕ್ತಿಯಾದ ದಕ್ಷಿಣ ಕನ್ನಡ ಜಿಲ್ಲಾ ನಿವೃತ್ತ ಅರೋಗ್ಯ ಮೇಲ್ವಿಚಾರಕ ಜಯರಾಮ್ ಪೂಜಾರಿ ದುಶ್ಚಟದದಿಂದ ಆಗುವ ತೊಂದರೆಗಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕ ಆದಮ್ ಸಾಹೇಬ್, ತಾಲೂಕು ಕೃಷಿ ಅಧಿಕಾರಿ ಭಾಸ್ಕರ್ ಎಂ,ಯೋಜನೆಯ ವಗ್ಗ ವಲಯದ ಮೇಲ್ವಿಚಾರಕರಾಕ ಸುರೇಶ್, ಸೇವಾ ಪ್ರತಿನಿಧಿಗಳಾದ ರಜನಿ, ರೇಖಾ ಪಿ. ಶಾಲಾ ಶಿಕ್ಷಕಿಯವರು, ಮಕ್ಕಳ ಪೋಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here