ಮುಲ್ಕಿ: ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರಗೆ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ದಲ್ಲಿ ಭಕ್ತಾಭಿಮಾನಿಗಳ ಸಹಕಾರದಲ್ಲಿ ನಡೆಯಲಿರುವ 4ನೇ ವರ್ಷದ ಉಡುಪಿ ಉಚ್ಚಿಲ ದಸರಾ ಉತ್ಸವದ ಸಲುವಾಗಿ ಪ್ರತಿಷ್ಠಾಪಿಸಲ್ಪಡುವ ನವ ದುರ್ಗೆಯರು ಮತ್ತು ಶಾರದಾ ಮಾತೆಯ ವಿಗ್ರಹಗಳ ರಚನೆಗೆ ಕ್ಷೇತ್ರದ ಅರ್ಚಕರಾದ ರಾಘವೇಂದ್ರ ಉಪಾಧ್ಯಾಯರ ನೇತೃತ್ವದಲ್ಲಿ ಮುಹೂರ್ತ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್, ಕ್ಷೇತ್ರದ ಅಧ್ಯಕ್ಷರಾದ ಗಿರಿಧರ್ ಸುವರ್ಣ, ಗುಂಡು ಬಿ. ಅಮೀನ್, ವಾಸುದೇವ ಸಾಲ್ಯಾನ್, ಸುಧಾಕರ್ ಕುಂದರ್, ಮೋಹನ್ ಬಂಗೇರ ಕಾಪು, ಪದ್ಮನಾಭ ಕೋಟ್ಯಾನ್, ವಿಗ್ರಹ ರಚನೆಗಾರರಾದ ಕುಬೇರ ಶಿವಮೊಗ್ಗ, ಎಂ.ಪಿ. ರಾಮ, ಲಾಲಾಜಿ ಕುಂದರ್, ಕ್ಷೇತ್ರದ ವ್ಯವಸ್ಥಾಪಕರಾದ ಸತೀಶ್ ಅಮೀನ್ ಪಡುಕರೆ ಹಾಜರಿದ್ದರು.