ಮೂಡುಬಿದಿರೆ : ಮಹಾರಾಷ್ಟçದ ಬಲ್ಹಾರಷ್‌ನಲ್ಲಿಏಪ್ರಿಲ್ 3ರಿಂದ ನಡೆಯುತ್ತಿರುವ2025-26ನೇ ಸಾಲಿನ ರಾಷ್ಟ್ರ ಮಟ್ಟದ 19ನೇ ಫ್ಲೋರ್ ಬಾಲ್ ಚಾಂಪಿಯನ್ ಷಿಪ್‌ನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲು ಮೂಡುಬಿದಿರೆಯ ಶ್ರೀ ಮಹಾವೀರ ಕಾಲೇಜಿನ ಪ್ರಥಮ ಬಿ.ಎ. ವಿದ್ಯಾರ್ಥಿನಿ ಕು. ವಿಕ್ರೀತ ಇವರು ಆಯ್ಕೆಯಾಗಿರುತ್ತಾರೆ.
ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಅಕ್ಷಿತ್ ರೈ ತರಬೇತಿ ನೀಡಿದ್ದಾರೆ.ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ-ಅಧ್ಯಾಪಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.

