ಧರ್ಮ, ರಾಷ್ಟ್ರ ಯೋಧರ ರಕ್ಷಣೆಗಾಗಿ ಶ್ರೀ ಸಾಯಿ ಈಶ್ವರ್ ಗುರೂಜಿ 108 ದಿನ 108 ದೇವಸ್ಥಾನ ಪ್ರದಕ್ಷಿಣೆ
ಏಕಜಾತಿ ಧರ್ಮಪೀಠ ದ್ವಾರಕಾಮಾಯಿ ಮಠದ ಪೀಠಾಧೀಶರಾದ ಮತ್ತು ಅಖಿಲ ಭಾರತೀಯ ಸಂತ ಸಮಿತಿ ಕರ್ನಾಟಕದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಸಾಯಿ ಈಶ್ವರ್ ಗುರೂಜಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಿಂದ ಜೂನ್ 14 ರಂದು ಬೆಳಿಗ್ಗೆ 9:00ಗೆ ಈ ಮಹಾ ಸಂಕಲ್ಪಕ್ಕೆ ಚಾಲನೆ ಕೊಟ್ಟು ಸಪ್ಟಂಬರ್ 29 ರವರೆಗೆ ಒಟ್ಟು 108 ದಿನ108 ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಧರ್ಮ ,ರಾಷ್ಟ್ರ ,ಯೋಧರ ರಕ್ಷಣೆಯ ಬಗ್ಗೆ ನಿತ್ಯ ಪ್ರಾರ್ಥನೆಗಾಗಿ ಮನವಿ ನೀಡಲಿದ್ದಾರೆ.
ಕ್ಷೇತ್ರ ದರ್ಶನದ ನೆನಪಿಗಾಗಿ ಬಿಲ್ವಪತ್ರೆಯ ಗಿಡವನ್ನು ದೇವಸ್ಥಾನದ ವಠಾರದಲ್ಲಿ ನೆಡೆಲಿದಿದ್ದಾರೆ. ಶ್ರೀ ಕ್ಷೇತ್ರ ಶಂಕರಪುರದಲ್ಲಿ ನಡೆಯುವ ಎಲ್ಲಾ ಧಾರ್ಮಿಕ,ಸಾಮಾಜಿಕ ಚಟುವಟಿಕೆಗಳು ಎಂದಿನಂತೆ ಮುಂದುವರಿಯುತ್ತದೆ. ಗುರುಗಳ ಸಾರ್ವಜನಿಕ ಬೇಟಿ ಸಾಂತ್ವನ ಕಾರ್ಯಕ್ರಮಗಳ ಬಗ್ಗೆ ಕಚೇರಿಯನ್ನು ಸಂಪರ್ಕಿಸಿ ಎಂದು ಮಠದ ಪ್ರಕಟಣೆ ತಿಳಿಸಿದೆ.