Sunday, July 14, 2024
HomeUncategorizedಶ್ರೀ ಸಾಯಿ ಈಶ್ವರ್ ಗುರೂಜಿಯವರ ಬನ್ನಂಜೆ ಶ್ರೀ ಶನಿ ಕ್ಷೇತ್ರದಲ್ಲಿ ಒಂಬತ್ತನೇ ದಿನದ ಪ್ರದಕ್ಷಿಣೆ

ಶ್ರೀ ಸಾಯಿ ಈಶ್ವರ್ ಗುರೂಜಿಯವರ ಬನ್ನಂಜೆ ಶ್ರೀ ಶನಿ ಕ್ಷೇತ್ರದಲ್ಲಿ ಒಂಬತ್ತನೇ ದಿನದ ಪ್ರದಕ್ಷಿಣೆ

ಶಂಕರಪುರ ದ್ವಾರಕಾಮಾಯಿ ಮಠದ ಶ್ರೀ ಸಾಯಿ ಈಶ್ವರ್ ಗುರೂಜಿಯವರ ಮಹಾ ಸಂಕಲ್ಪದಂತೆ 108 ದಿನ 108 ಕ್ಷೇತ್ರ ಪ್ರದಕ್ಷಿಣೆಯ ಒಂಬತ್ತನೇ ದಿನದ ಪ್ರದಕ್ಷಿಣೆಗೆ ದಿನಾಂಕ: 22-06-2024 ಶನಿವಾರ ಬನ್ನಂಜೆ ಶ್ರೀ ಶನಿ ಕ್ಷೇತ್ರದ ಪ್ರಧಾನ ಅರ್ಚಕರಿಗೆ ಧರ್ಮ, ರಾಷ್ಟ್ರ, ಯೋಧರು ಹಾಗೂ ಅವರ ಕುಟುಂಬದ ರಕ್ಷಣೆ , ಗೋರಕ್ಷಣೆ, ಸನಾತನ ಧರ್ಮ ರಕ್ಷಣೆ ಮತ್ತು ಹಿಂದೂಗಳು ಮತಾಂತರವಾಗುವುದನ್ನು ತಡೆಯುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರದಲ್ಲಿ ನಿತ್ಯ ಪೂಜೆಯ ಬಳಿಕ ವಿಶೇಷ ಪ್ರಾರ್ಥನೆ ಮಾಡುವಂತೆ ಮನವಿ ಸಲ್ಲಿಸಿ ಬಿಲ್ವಾ ಪತ್ರೆಯ ಗಿಡ ನೀಡಿ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಸುಧಾಕರ್ ಶೆಟ್ಟಿ , ವೀಣಾ .ಎಸ್. ಶೆಟ್ಟಿ, ಇನ್ನಂಜೆ ಶಶಿಧರ್ ಶೆಟ್ಟಿ ಉದ್ಯಮಿ ಮುಂಬೈ, ವಿಜಯ ಕುಂದರ್, ಶಿವದಾಸ್ , ಸತೀಶ್ ದೇವಾಡಿಗ, ಶಶಾಂಕ್ , ನಿಲೇಶ್ ಅಭಿಮಾನಿ ಭಕ್ತರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular