Saturday, May 24, 2025
Homeಮಂಗಳೂರುತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ನ ಸದಸ್ಯ ಸುಶಾನ್ ದೇವಾಡಿಗ ಇವರು ರಾಷ್ಟ್ರೀಯ...

ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ನ ಸದಸ್ಯ ಸುಶಾನ್ ದೇವಾಡಿಗ ಇವರು ರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆ

ಮಂಗಳೂರು ವಿಶ್ವವಿದ್ಯಾನಿಲಯದ ಇಂಟರ್ ಕಾಲೇಜ್ ಕರಾಟೆ(ಹುಡುಗರು ಮತ್ತು ಹುಡುಗಿಯರು) ಚ್ಯಾಂಪಿಯನ್ ಶಿಪ್ 2024 -2025 ಮಂಗಳೂರು ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ದಿನಾಂಕ 28/10/2024 ರಂದು ಮಂಗಳೂರಿನ ರೋಶನಿ ನಿಲಯ‌(ಅಟೋನಾಮಸ್)ದಲ್ಲಿ ಜರುಗಿದ ರಾಜ್ಯ ಮಟ್ಟದ ಕರಾಟೆ ಚ್ಯಾಂಪಿಯನ್ ಶಿಪ್ ನಲ್ಲಿ ಮಂಗಳೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿ 60 ಕೆ.ಜಿ ವಿಭಾಗದಲ್ಲಿ ಸುಶಾನ್ ದೇವಾಡಿಗ ಇವರು ಚಿನ್ನದ ಪದಕ ಪಡೆದು ರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಇವರು ಎಲ್.ಎನ್.ಸಿ.ಟಿ ವಿಶ್ವವಿದ್ಯಾನಿಲಯ ಕೋಲಾರ್,ಭೋಪಾಲ, ಮಧ್ಯಪ್ರದೇಶದಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮಂಗಳೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಲಿದ್ದಾರೆ‌ ಸುಶಾನ್ ದೇವಾಡಿಗ ಇವರು ಜಿಲ್ಲಾ,ರಾಜ್ಯ,ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ (ರಿ)ತೋಕೂರು,ಹಳೆಯಂಗಡಿ ಇದರ ಸದಸ್ಯರಾಗಿದ್ದು,ಪ್ರಸ್ತುತ ಸ್ಪೋರ್ಟ್ಸ್ ಕ್ಲಬ್ ನಲ್ಲಿ ನಡೆಯುತ್ತಿರುವ ಕರಾಟೆ ತರಗತಿಯಲ್ಲಿ ತರಬೇತಿಯನ್ನು ನೀಡುತ್ತಿದ್ದಾರೆ.

RELATED ARTICLES
- Advertisment -
Google search engine

Most Popular