ಬಂಟ್ವಾಳ: ಮಾದಕ ವಸ್ತುಗಳಿಗೆ ಇಂದಿನ ಯುವಜನತೆ ಹೆಚ್ಚೆಚ್ಚು ಆಕರ್ಷಿತರಾಗುತ್ತಿರುವುದು ಸಮೀಕ್ಷೆಗಳಿಂದ ತಿಳಿಯುತ್ತಿದೆ. ಯುವಜನತೆಯು ದಾರಿ ತಪ್ಪಿದಲ್ಲಿ ದೇಶಕ್ಕೆ ಮಾರಕವಾಗುವುದು ಎಂದು ವೆಂಕಟರಮಣ ಸ್ವಾಮಿ ಕಾಲೇಜಿನ ಪ್ರಾಂಶುಪಾಲರಾದ ಎಂ.ಡಿ.ಮಂಚಿ ನುಡಿದರು.
ಇವರು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯಡಿಯಲ್ಲಿ ಆಯೋಜಿಸಿದ್ದ ‘ನಶಾಮುಕ್ತ ಭಾರತ ಅಭಿಯಾನ’ ಕಾರ್ಯಕ್ರಮದಲ್ಲಿ ಮಾತನಾಡಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಎನ್ನೆಸ್ಸೆಸ್ ಕಾರ್ಯಕ್ರಮಾಧಿಕಾರಿ ಡಾ. ಕಾಶೀನಾಥ ಶಾಸ್ತ್ರಿ ಎಲ್ಲರನ್ನೂ ಸ್ವಾಗತಿಸಿದರು. ವೇದಿಕಯಲ್ಲಿ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಅಖಿಲಾ ಪೈ ಉಪಸ್ಥಿತರಿದ್ದರು.