ಬಂಟ್ವಾಳ: ಮತದಾನ ಪ್ರತಿಯೊಬ್ಬರ ಆದ್ಯಕರ್ತವ್ಯ. ದೇಶದ ಪ್ರಗತಿಗೆ ಇದು ಅತ್ಯಂತ ಅಗತ್ಯವಾದುದು. ಇಂದಿನ ಯುವಜನತೆ ತಮಗಿರುವ ಮತದಾನವೆಂಬ ಹಕ್ಕು ಮತ್ತು ಕರ್ತವ್ಯವನ್ನು ಪಾಲಿಸಬೇಕು ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ.ಸುಯೋಗ ವರ್ಧನ್ ಡಿ.ಎಮ್.ರವರು ಕರೆ ನೀಡಿದರು. ಇವರು ಕಾಲೇಜಿನ ರಾಷ್ಟೀಯ ಸೇವಾ ಯೋಜನಾ ಘಟಕ ಹಾಗೂ ಚುನಾವಣಾ ಸಾಕ್ಷರತಾ ಕ್ಲಬ್‌ನ ಸಹಯೋಗದಲ್ಲಿ ಆಯೋಜಿಸಿದ್ದ ರಾಷ್ಟೀಯ ಮತದಾರರ ದಿನಾಚರಣೆಯಲ್ಲಿ ಮಾತನಾಡಿದರು ಹಾಗೂ ವಿದ್ಯಾರ್ಥಿಗಳಿಗೆ ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಡಾ.ಕಾಶೀನಾಥ ಶಾಸ್ತಿç ಹೆಚ್.ವಿ. ಸ್ವಾಗತಿಸಿ ಇ.ಎಲ್.ಸಿ. ಸಂಯೋಜಕರಾದ ಡಾ.ವಿನಾಯಕ ಕೆ.ಎಸ್. ವಂದಿಸಿದರು.