ಶ್ರೀ ವಿಜಯಲಕ್ಷ್ಮಿ ಯುವಕ ಸಂಘ ರಿ.) ನರಿಕೊಂಬು ಇದರ 31ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

0
37

ಬಂಟ್ವಾಳ : ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ಶ್ರೀ ವಿಜಯಲಕ್ಷ್ಮಿ ಯುವಕ ಸಂಘ (ರಿ.) ಇದರ 31ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾರ್ವಜನಿಕ ಅನ್ನ ಸಂತರ್ಪಣೆ ಕಾರ್ಯಕ್ರಮ ಜನವರಿ 1 .2026 ನೇ ಗುರುವಾರ ನರಿಕೊಂಬು ಶ್ರೀ ನಾರಿಕುಂಬೇಶ್ವರ ದೇವಸ್ಥಾನದಲ್ಲಿ ಜರಗಿತು. ಈ ಸಂದರ್ಭದಲ್ಲಿದ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಿತೇಂದ್ರ ಜೆ ಸುರ್ವಣ ರವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಗನ್ನಾಥ ಬಂಗೇರ ನಿರ್ಮಾಲ್ ವಹಿಸಿದರು. ಸಂಘದ ಮಾಜಿ ಅಧ್ಯಕ್ಷ ಬಾಬು ಮಸ್ತರ್, ಸಂಘದ ಅಧ್ಯಕ್ಷರಾದ ಹರೀಶ್ ಟೈಲರ್,ಉಪಾಧ್ಯಕ್ಷರಾದ ಮಾಧವ ಕರ್ಬೆಟ್ಟು, ಪ್ರದಾನ ಕಾಯದರ್ಶಿ ಪ್ರಸಾದ್, ಜೊತೆಕಾರ್ಯದರ್ಶಿ ಸುರೇಶ್ ಕುಲಾಲ್, ಕೋಶಾಧಿಕಾರಿ ಕೃಷ್ಣಪ್ಪ ಗೌರವ ಅಧ್ಯಕ್ಷರಾದ ಜಗದೀಶ್ ವೇದಿಕೆಯಲ್ಲಿ ಉಪಸ್ಥಿತಿದ್ದರು
ಕ್ರೀಡಾ ಕಾರ್ಯದರ್ಶಿ ಗಿರೀಶ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ, ಕೋಶಾಧಿಕಾರಿ ಕೃಷ್ಣಪ್ಪ ಅಂತರ ವಂದಿಸಿದರು.

LEAVE A REPLY

Please enter your comment!
Please enter your name here