ಕಾರ್ಕಳದ ಶ್ರೀಮದ್ ಭುವನೇಂದ್ರ ಪ್ರೌಢಶಾಲೆಯು 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶ್ರೇಷ್ಠ ಸಾಧನೆ ಮಾಡಿದೆ. ಕನ್ನಡ ಮಾಧ್ಯಮದಡಿ ಪರೀಕ್ಷೆಗೆ ಹಾಜರಾದ ಒಟ್ಟು 34 ವಿದ್ಯಾರ್ಥಿಗಳಲ್ಲಿ ಎಲ್ಲಾ 34 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶಾಲೆಯು ಶೇ.100 ಫಲಿತಾಂಶ ದಾಖಲಿಸಿದೆ.
ಉತ್ತೀರ್ಣರಾದ ವಿದ್ಯಾರ್ಥಿಗಳಲ್ಲಿ 7 ಮಂದಿ ಡಿಸ್ಟಿಂಕ್ಷನ್, 24 ಮಂದಿ ಪ್ರಥಮ ದರ್ಜೆ ಹಾಗೂ 3 ಮಂದಿ ದ್ವಿತೀಯ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಶಿಕ್ಷಕ ವೃಂದ ಹಾಗೂ ಪಾಲಕರ ಸಹಕಾರ ಪ್ರಮುಖ ಕಾರಣವಾಗಿದೆ.

