ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡರು ರೈತ ಮುಖಂಡರೊಂದಿಗೆ ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಭೇಟಿ

0
20

ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಶೃಂಗೇರಿ ಕ್ಷೇತ್ರದ ಶಾಸಕರು ಹಾಗೂ ನವೀಕರಿಸಬಹುದಾದ ಇಂಧನ ನಿಗಮದ ಅಧ್ಯಕ್ಷರಾದ ಟಿ.ಡಿ. ರಾಜೇಗೌಡರು, ಶೃಂಗೇರಿಯ ಕೆಲ ಪ್ರಮುಖ ರೈತ ಮುಖಂಡರೊಂದಿಗೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಹಾಗೂ ಪೂಜೆಯನ್ನು ಸಲ್ಲಿಸಿದರು.

ಶೃಂಗೇರಿ ಕ್ಷೇತ್ರದ ಕೆಲವು ಭಾಗಗಳಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು, ಇದರಿಂದ ಅಲ್ಲಿನ ರೈತರು ಹಾಗೂ ಸಾರ್ವಜನಿಕರು ತುಂಬಾ ಅನಾನುಕೂಲತೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ, ಈ ಸಮಸ್ಯೆಗೆ ಪರಿಹಾರ ದೊರಕಲೆಂದು ಆನೆಗುಡ್ಡೆ ಶ್ರೀ ವಿನಾಯಕ ದೇವರಿಗೆ ತುಲಾಭಾರ ಸೇವೆಯ ಹರಕೆಯನ್ನು ಸಮರ್ಪಿಸುವ ಪ್ರಾರ್ಥನೆ ಮಾಡಿಕೊಂಡರು. ಅರ್ಚಕರಾದ ಸುಬ್ರಹ್ಮಣ್ಯ ಉಪಾಧ್ಯಾಯರು ದೇವರಲ್ಲಿ ಈ ಕುರಿತು ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ಮಲ್ಯಾಡಿ ಶಿವರಾಮ ಶೆಟ್ಟಿ, ದಿನೇಶ್ ಹೆಗ್ಡೆ ಮೊಳಹಳ್ಳಿ, ಮಡಾಮಕ್ಕಿ ಶಶಿಧರ ಶೆಟ್ಟಿ, ಅಣ್ಣಯ್ಯ ಪುತ್ರನ್ ಕುಂಭಾಸಿ ಸೇರಿದಂತೆ ಇತರ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದು ದೇವರ ಪ್ರಸಾದವನ್ನು ಸ್ವೀಕರಿಸಿದರು.

ಆಡಳಿತ ಮಂಡಳಿಯ ಸದಸ್ಯರು, ಪರ್ಯಾಯ ಅರ್ಚಕರಾದ ಕೆ. ವ್ಯಾಸ ಉಪಾಧ್ಯಾಯ ಮತ್ತು ಸಹೋದರರು, ಕಚೇರಿಯ ಪ್ರಬಂಧಕರಾದ ನಟೇಶ್ ಕಾರಂತ್ ಹಾಗೂ ದೇವಸ್ಥಾನದ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here