ಉಜಿರೆ: ಶೃಂಗೇರಿ ಪೂಜ್ಯ ವಿಧುಶೇಖರಭಾರತಿ ಸ್ವಾಮೀಜಿ ನಾಳೆ ಭಾನುವಾರ ಧರ್ಮಸ್ಥಳಕ್ಕೆ ಆಮಿಸುವರು.
ಭಾನುವಾರ ಸಂಜೆ ನಾಲ್ಕು ಗಂಟೆಗೆ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯುವ ಸಮಾರಂಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ “ವಾತ್ಸಲ್ಯ” ಮನೆಗಳ ಹಸ್ತಾಂತರ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡುವರು.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು.