ಎಸ್.ಎಸ್.ಎಲ್.ಸಿ. ಮಕ್ಕಳಿಗೆ ಕಲಾಕುಂಚದಿಂದ ಪ್ರತಿಭಾ ಪುರಸ್ಕಾರ

0
14

ದಾವಣಗೆರೆ : ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಆಶ್ರಯದಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬಂದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ ಎಂದು ಕಲಾಕುಂಚ ಅಧ್ಯಕ್ಷರಾದ ವಾಸುದೇವ ಲಕ್ಷ್ಮ ಣ್ ರಾಯ್ಕರ್ ತಿಳಿಸಿದ್ದಾರೆ.

ಪ್ರಥಮ ಭಾಷೆ ಕನ್ನಡದಲ್ಲಿ 125ಕ್ಕೆ 125 ಪರಿಪೂರ್ಣ ಅಂಕಪಡೆದರೆ ಕಲಾಕುಂಚದಿAದ “ಕನ್ನಡ ಕೌಸ್ತುಭ” ರಾಜ್ಯ ಪ್ರಶಸ್ತಿ, 625ಕ್ಕೆ 600ಕ್ಕೂ ಹೆಚ್ಚು ಅಂಕ ಪಡೆದ ಮಕ್ಕಳಿಗೆ ರಾಜ್ಯ ಮಟ್ಟದಲ್ಲಿ “ಸರಸ್ವತಿ ಪುರಸ್ಕಾರ” ರಾಜ್ಯ ಪ್ರಶಸ್ತಿ, ಪ್ರಥಮ ಭಾಷೆ ಕನ್ನಡದಲ್ಲಿ 125 ಕ್ಕೆ 120ರಿಂದ 124ರವರೆಗೆ ಅಂಕ ಪಡೆದ ಮಕ್ಕಳಿಗೆ ಜಿಲ್ಲಾ ಮಟ್ಟದಲ್ಲಿ “ಕನ್ನಡ-ಕುವರ-ಕುವರಿ‘’ ಜಿಲ್ಲಾ ಪ್ರಶಸ್ತಿ ವಿತರಿಸಲಾಗುವುದು ಎಂದು ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್‌ಶೆಣೈ ಪ್ರಕಟಿಸಿದ್ದಾರೆ.

ಈ ಪ್ರಶಸ್ತಿಗೆ ಆಯ್ಕೆಯಾದವರ ಮಕ್ಕಳಿಗೆ ಸಮಾರಂಭದ ದಿನ ಮಂಗಳ ವಾದ್ಯದೊಂದಿಗೆ ಕಲಾಕುಂಚ ಮುತ್ತೆöÊದೆಯರು ಕನ್ನಡ ತಿಲಕವಿಟ್ಟು, ಕನ್ನಡ ಕಂಕಣ ಕಟ್ಟಿ, ಕನ್ನಡಾರತಿ ಬೆಳಗುತ್ತಾರೆ. ವೇದಿಕೆಯಲ್ಲಿ ಪ್ರತ್ಯೇಕ ಮದುವೆ ಮಂಟಪದಲ್ಲಿ ಸಿಂಹಾಸನದ ಮೇಲೆ ಕೂರಿಸಿ, ಪುಷ್ಪ ವೃಷ್ಟಿಯೊಂದಿಗೆ ಮಕ್ಕಳ ತಲೆಯ ಮೇಲೆ ಕಿರೀಟವಿಟ್ಟು ಅವರ ಅವರದೇ ಭಾವಚಿತ್ರವಿರುವ ತಂದೆ-ತಾಯಿಯ ಹೆಸರು ವಿದ್ಯಾಭ್ಯಾಸ ಮಾಡಿದ ಶಾಲೆಯ ಹೆಸರಿನೊಂದಿಗೆ ಅಭಿನಂದನಾ ಪತ್ರ, ಕನ್ನಡ ತಾಯಿ ಭುವನೇಶ್ವರಿಯ ಸ್ಮರಣಿಕೆ ನೀಡಿ ಗೌರವಿಸಲಾಗುತ್ತದೆ.

ಹೆಚ್ಚಿನ ಮಾಹಿತಿಗೆ 9538732777, 9945785170 ಈ ಸನೀಹವಾಣಿಗಳಿಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ಉಮೇಶ್ ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here