ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.100 ಅಂಕ: ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಜಿ. ಮಾಧುರ್ಯಗೆ ಸನ್ಮಾನ

0
7

ಧರ್ಮಸ್ಥಳ, ಜೂನ್ 8: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ–ರಲ್ಲಿ ಧರ್ಮಸ್ಥಳದ ಎಸ್.ಡಿ.ಎಂ. ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಜಿ. ಮಾಧುರ್ಯ ಅವರು 625ಕ್ಕೆ 625 ಅಂಕಗಳನ್ನು ಗಳಿಸಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

ಮಾಧುರ್ಯ ಅವರು ಧರ್ಮಸ್ಥಳದ ಅನ್ನಪೂರ್ಣ ಛತ್ರದ ಪ್ರಬಂಧಕರಾದ ಸುಬ್ರಹ್ಮಣ್ಯ ಪ್ರಸಾದ್ ಹಾಗೂ ಮಧುರಾ ದಂಪತಿಯ ಪುತ್ರಿಯಾಗಿದ್ದಾರೆ.

ಅವರ ಈ ಅಪೂರ್ವ ಸಾಧನೆಯನ್ನು ಅಭಿನಂದಿಸಿ, ಜೂನ್ 8ರಂದು ಧರ್ಮಸ್ಥಳ ಅನ್ನಪೂರ್ಣ ಛತ್ರದ ಹಿರಿಯ ಸಿಬ್ಬಂದಿಗಳಾದ ಭರತ್‌ರಾಜ್ ಜೈನ್, ಶ್ರೇಣಿಕ್ , ರಾಜು ಸಪಲ್ಯ , ದೇವಿಪ್ರಸಾದ್ , ಅಪ್ಪು ಬಿ , ಬಾಬು ಬಿ , ಉಮೇಶ ಯಂ , ಬಾಕಕೃಷ್ಣ ಶೆಟ್ಟಿಹಾಗೂ ಇತರ ಸಿಬ್ಬಂದಿಗಳು ಜಿ. ಮಾಧುರ್ಯ ಅವರನ್ನು ಸನ್ಮಾನಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಿಬ್ಬಂದಿಗಳು, ಮಾಧುರ್ಯ ಅವರ ಸಾಧನೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದ್ದು, ಮುಂದಿನ ವಿದ್ಯಾಭ್ಯಾಸದಲ್ಲಿಯೂ ಇದೇ ರೀತಿ ಉನ್ನತ ಸಾಧನೆ ಮಾಡಿ ಕುಟುಂಬ, ಶಾಲೆ ಹಾಗೂ ಸಮಾಜಕ್ಕೆ ಕೀರ್ತಿ ತರಲಿ ಎಂದು ಹಾರೈಸಿದರು.

LEAVE A REPLY

Please enter your comment!
Please enter your name here