ದಾವಣಗೆರೆ : ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯವತಿಯಿಂದ ೨೦೨೩-೨೪ನೇ ಸಾಲಿನ ಸಾರ್ವಜನಿಕ ಶಿಕ್ಷಣ ಇಲಾಖೆಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶಕ್ಕಾಗಿ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಶುಭ ಹಾರೈಸಿದ್ದಾರೆ ಎಂದು ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್‌ಶೆಣೈ ತಿಳಿಸಿದ್ದಾರೆ. ಮಾರ್ಚ್ 25ರಿಂದ ಏಪ್ರಿಲ್ 7 ರವರೆಗೆ ನಡೆಯುವ ಜೀವನದ ತಿರುವಿನ ಈ ಮಹತ್ವಪೂರ್ಣ ಪರೀಕ್ಷೆಯಲ್ಲಿ ಮಕ್ಕಳು ಯಾವುದೇ ಭಯ-ಭೀತಿಯಿಲ್ಲದೇ, ಕಷ್ಟಪಡೆದೇ ಇಷ್ಟಪಟ್ಟು, ಸಮಯಪ್ರಜ್ಞೆ, ಕರ್ತವ್ಯನಿಷ್ಟೆ, ಬದ್ಧತೆಯಿಂದ ಮಾನಸಿಕ ಸಿದ್ದತೆಯಿಂದ ತೊಡಗಿಸಿಕೊಂಡು ಪರೀಕ್ಷೆ ಎದುರಿಸಿ ಉಜ್ವಲ ಅಂಕಪಟ್ಟಿಯೊಂದಿಗೆ ಉತ್ತೀರ್ಣರಾಗಿ ಸಾಧನೆಯೊಂದಿಗೆ ಪ್ರಥಮ ಭಾಷೆ ಕನ್ನಡದಲ್ಲಿ 125ಕ್ಕೆ 125 ಪರಿಪೂರ್ಣ ಅಂಕಪಡೆದ ಮಕ್ಕಳಿಗೆ “ಕನ್ನಡ ಕೌಸ್ತುಭ” ರಾಜ್ಯ ಪ್ರಶಸ್ತಿ, 725ಕ್ಕೆ 700ಕ್ಕೂ ಹೆಚ್ಚು ಅಂಕ ಪಡೆದ ಮಕ್ಕಳಿಗೆ ರಾಜ್ಯ ಮಟ್ಟದಲ್ಲಿ “ಸರಸ್ವತಿ ಪುರಸ್ಕಾರ” ರಾಜ್ಯ ಪ್ರಶಸ್ತಿ, ಪ್ರಥಮ ಭಾಷೆ ಕನ್ನಡದಲ್ಲಿ 125ಕ್ಕೆ 120ರಿಂದ 124 ರವರೆಗೆ ಅಂಕ ಪಡೆದ ಮಕ್ಕಳಿಗೆ ದಾವಣಗೆರೆ ಜಿಲ್ಲಾ ಮಟ್ಟದಲ್ಲಿ ‘ಕನ್ನಡ-ಕುವರ-ಕುವರಿ‘’ ಜಿಲ್ಲಾ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ ಕೆ.ಹೆಚ್.ಮಂಜುನಾಥ್ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ 9538732777 ಈ ಸನೀಹವಾಣಿಗೆ ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಶೈಲಾ ವಿಜಯಕುಮಾರ್ ವಿನಂತಿಸಿದ್ದಾರೆ.