ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಉಡುಪಿಗೆ ದ್ವೀತಿಯ ಸ್ಥಾನ

0
55

ಮಂಗಳೂರು: 2025-26ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶ  ಬುಧವಾರ (ಏಪ್ರಿಲ್ 23) ಶಿಕ್ಷಣ ಇಲಾಖೆಯ ವೆಬ್​ಸೈಟ್​ನಲ್ಲಿ ಪ್ರಕಟವಾಗಿದೆ. ಅದಾದ ಬೆನ್ನಲ್ಲೇ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶದ ವಿವರ ನೀಡಿದರು. ಈ ಬಾರಿ SSLC ಪರೀಕ್ಷೆಯಲ್ಲಿ ಶೇ 94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ದಾಖಲೆಯ ಫಲಿತಾಂಶ ಬಂದಿದೆ ಎಂದು ಸಚಿವರು ತಿಳಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇಕಡಾ 98.40ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ಫಲಿತಾಂಶದಲ್ಲಿ ಮೊದಲ ಸ್ಥಾನ ಪಡೆದಿದೆ. ಉಡುಪಿ ಜಿಲ್ಲೆ ಶೇ 98.18 ರ ಫಲಿತಾಂಶದೊಂದಿಗೆ 2ನೇ ಸ್ಥಾನದಲ್ಲಿದೆ. ಉತ್ತರ ಕನ್ನಡ 3ನೇ ಸ್ಥಾನ (ಶೇ 98.09), ಹಾಸನ 4ನೇ ಸ್ಥಾನ (ಶೇ 97.51) ಗಳಿಸಿವೆ.

7 ಮಂದಿ ವಿದ್ಯಾರ್ಥಿಗಳಿಗೆ ಔಟ್ ಆಫ್ ಔಟ್

ಏಳು ಮಂದಿ ವಿದ್ಯಾರ್ಥಿಗಳು 625ರಲ್ಲಿ 625 ಅಂಕ ಪಡೆದಿದ್ದಾರೆ. ದಾವಣಗೆರೆಯ ಭರತ್​, ಚಿಕ್ಕಮಗಳೂರಿನ ಬೃಂದಾ, ಬೆಂಗಳೂರು ಉತ್ತರದ ಧನುಷ್​, ಉಡುಪಿಯ ಪ್ರೀತಂ, ಚಿಕ್ಕೋಡಿಯ ಪ್ರಾರ್ಥನಾ, ವಿಜಯಪುರದ ಸೌಜನ್ಯಾ, ರಾಯಚೂರಿನ ಸುಖದೇವ್ 625ರಲ್ಲಿ 625 ಅಂಕ ಪಡೆದವರಾಗಿದ್ದಾರೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧಿಕೃತ ಪೋರ್ಟಲ್ https://karresults.nic.in ಮೂಲಕವೂ ಫಲಿತಾಂಶ ವೀಕ್ಷಿಸಬಹುದಾಗಿದೆ. ಹಾಗೇಯೇ ‘KarnatakaOne’ ಮೊಬೈಲ್ ಆ್ಯಪ್ ಮೂಲಕವೂ ಫಲಿತಾಂಶ ಪರಿಶೀಲಿಸಿಕೊಳ್ಳಬಹುದು. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಮೊಬೈಲ್ ಸಂಖ್ಯೆಗೆ ಮಂಡಳಿ ವತಿಯಿಂದಲೇ ನೇರವಾಗಿ ಫಲಿತಾಂಶದ ವಿವರಗಳು ಎಸ್‌ಎಂಎಸ್ ಅಥವಾ ವಾಟ್ಸಾಪ್ ಮೂಲಕ ರವಾನೆಯಾಗುತ್ತಿದೆ.

LEAVE A REPLY

Please enter your comment!
Please enter your name here