ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಆನಂದಪುರದ ಕೆಪಿಎಸ್ ಶಾಲೆ ವಿದ್ಯಾರ್ಥಿ ಭಾನುವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪರಶುರಾಮ್(17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಎಸ್‌ಎಸ್‌ಎಲ್ಸಿ ಪರೀಕ್ಷೆಯ ಓದಿನ ಒತ್ತಡದ ಕಾರಣ ಖಿನ್ನತೆಗೆ ಒಳಗಾಗಿದ್ದ ಎನ್ನಲಾಗಿದೆ.
ಯಡೆಹಳ್ಳಿ ಗ್ರಾಮದ ಪರಶುರಾಮ್ ಎಂದಿನಂತೆ ಭಾನುವಾರ ಓದುತ್ತಿದ್ದ. ಬೆಳಗ್ಗೆ ಎದ್ದು ಮನೆಯವರು ಹಿಂಬದಿಯ ಬಾಗಿಲು ತೆಗೆದಾಗ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಮೃತ ದೇಹ ಪತ್ತೆಯಾಗಿದೆ. ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.