ದಾವಣಗೆರೆ :2023-24ನೇ ಸಾಲಿನ ಸಾರ್ವಜನಿಕ ಶಿಕ್ಷಣ ಇಲಾಖೆಯ ಎಸ್.ಎಸ್.ಎಲ್.ಸಿ. ಪರೀಕ್ಷೆ
ಇತ್ತೀಚಿಗೆ ಮುಗಿದಿದ್ದು ಫಲಿತಾಂಶ ಸದ್ಯದಲ್ಲೇ ಬರಲಿದೆ. ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯು ಪ್ರತೀ ವರ್ಷದಂತೆ ಈ ವರ್ಷವೂ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಪ್ರಥಮ ಭಾಷೆ ಕನ್ನಡದಲ್ಲಿ 125ಕ್ಕೆ 125 ಪರಿಪೂರ್ಣ ಅಂಕಪಡೆದ ಮಕ್ಕಳಿಗೆ “ಕನ್ನಡ ಕೌಸ್ತುಭ” ರಾಜ್ಯ ಪ್ರಶಸ್ತಿ, ಒಟ್ಟು ಅಂಕ 625ಕ್ಕೆ 600ಕ್ಕೂ ಹೆಚ್ಚು ಅಂಕ ಪಡೆದ ಮಕ್ಕಳಿಗೆ ರಾಜ್ಯ ಮಟ್ಟದಲ್ಲಿ “ಸರಸ್ವತಿ ಪುರಸ್ಕಾರ” ರಾಜ್ಯ ಪ್ರಶಸ್ತಿ ವಿತರಿಸಲಾಗುತ್ತದೆ ಎಂದು ಈ ಸಿಹಿ ಸುದ್ದಿಯನ್ನು ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್‌ಶೆಣೈ ತಿಳಿಸಿದ್ದಾರೆ. ಫಲಿತಾಂಶ ಬರುತ್ತಿದ್ದಂತೆ 9538732777, 9481722376, 9743897578 ಈ ಸನೀಹವಾಣಿ ಸಂಖ್ಯೆಗಳಿಗೆ ಪೋಷಕರು, ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸಂಪರ್ಕಿಸಬಹುದು ಎಂದು ಎಂದು ಸಂಸ್ಥೆಯ ಅಧ್ಯಕ್ಷ ಕೆ.ಹೆಚ್.ಮಂಜುನಾಥ್ ವಿನಂತಿಸಿದ್ದಾರೆ.