Thursday, July 25, 2024
Homeರಾಜ್ಯಚುನಾವಣಾ ಕರ್ತವ್ಯದ ವೇಳೆ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ

ಚುನಾವಣಾ ಕರ್ತವ್ಯದ ವೇಳೆ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ

ವೈಯಕ್ತಿಕ ಕಾರಣಗಳಿಂದ ಚುನಾವಣಾ ಕರ್ತವ್ಯ ಮಾಡುತ್ತಿದ್ದ ಸಿಬ್ಬಂದಿಯೊಬ್ಬರು ಎ.2 ರ ಮಂಗಳವಾರ ಆತ್ಮಹತ್ಯಗೆ ಯತ್ನಿಸಿದ ಘಟನೆಯೊಂದು ನಡೆದಿದೆ. ಈ ಘಟನೆ ನಗರದ ಜಿಲ್ಲಾಧಿಕಾರಿಯವರ ಕಚೇರಿ ಆವರಣದಲ್ಲಿ ನಡೆದಿದೆ.

ಶ್ರೀಧರ ಹೆಗಡೆ ಎಂಬುವವರೇ ಆತ್ಮಹತ್ಯೆಗೆ ಯತ್ನಿಸಿದ ಸಿಬ್ಬಂದಿ. ನಗರದ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿರುವ ಏಕಗವಾಕ್ಷಿ ಪದ್ಧತಿ ತಂಡದ ಸದಸದ್ಯರು ಇವರು.

ವೈಯಕ್ತಿಕ ಕಾರಣದಿಂದ ಆತ್ಮಹತ್ಯೆಗೆ ಯತ್ನಿಸಿರುವ ಕುರಿತು ವರದಿಯಾಗಿದೆ. ಇವರನ್ನು ವೆನ್‌ಲಾಕ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಹೆಚ್ಚಿನ ಚಿಕಿತ್ಸೆಗೆಂದು ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರ ಮಾಡಲಾಗಿದೆ.

ಇವರ ಪತ್ನಿ ಜಯಂತಿ ಎಂಬುವವರು. ಇವರು ಬೆಳ್ತಂಗಡಿಯಲ್ಲಿ ಸ್ಟಾಫ್‌ ನರ್ಸ್‌ ಆಗಿ ಕೆಲಸ ಮಾಡುತ್ತಿದ್ದಾರೆ.

RELATED ARTICLES
- Advertisment -
Google search engine

Most Popular