ಡಾ. ಶಿರೂರು ಅವರಿಗೆ ಕರುನಾಡ ಕನ್ನಡ ಕಣ್ಮಣಿ ರಾಜ್ಯ ಪ್ರಶಸ್ತಿಯ ಗೌರವ: ಗಣೇಶ್ ಶೆಣೈ

0
8

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಹೋಲಿ ರೋಸರಿ ಪ್ರೌಢಶಾಲೆಯ ಕನ್ನಡ ಅಧ್ಯಾಪಕ ಡಾ. ರಾಮಕೃಷ್ಣ ಶಿರೂರು ಅವರು ಕರುನಾಡ ಕನ್ನಡ ಕಣ್ಮಣಿ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ದಾವಣಗೆರೆ ಕಲಾಕುಂಚ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿರುತ್ತಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಹೋಲಿ ರೋಸರಿ ಪ್ರೌಢಶಾಲೆಯ ಕನ್ನಡ ಅಧ್ಯಾಪಕ ಡಾ. ರಾಮಕೃಷ್ಣ ಶಿರೂರು ಅವರು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಶ್ರೀ ಭವಾನಿ ಶಂಕರ ಶಾನುಭೋಗ ಮತ್ತು ಶ್ರೀಮತಿ ಸರೋಜಿನಿ ಶಾನುಭೋಗ ಅವರ ಪುತ್ರ. ಇವರು ಕಳೆದ ಮೂರು ದಶಕಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ.

ಡಾ. ಶಿರೂರು ಅವರು ಭಾಷಾ ಶಿಕ್ಷಕರಾಗಿ, ಸಾಹಿತ್ಯ ಸೌರಭ ಮತ್ತು ಸಿರಿಪುರ ಸಾಂಸ್ಕೃತಿಕ ಪ್ರತಿಷ್ಠಾನದ ಸಂಘಟಕರಾಗಿ, ಪ್ರೌಢಶಾಲಾ ಸಹ ಶಿಕ್ಷಕ ಸಂಘದ ತಾಲೂಕು, ಜಿಲ್ಲೆ ಮತ್ತು ರಾಜ್ಯದ ಕಾರ್ಯದರ್ಶಿಯಾಗಿ, ಉಪಾಧ್ಯಕ್ಷರಾಗಿ, ಅಧ್ಯಕ್ಷರಾಗಿ, ತಾಲೂಕು ಶಿಕ್ಷಕ ದಿನಾಚರಣಾ ಸಮಿತಿಯ ಜಂಟಿ ಕಾರ್ಯದರ್ಶಿಯಾಗಿ ಸ್ಮರಣೀಯ ಸೇವೆಯನ್ನು ಸಲ್ಲಿಸುತ್ತಾ ಬಂದಿದ್ದಾರೆ. ಈ ಎಲ್ಲ ಸಾಧನೆಗಳನ್ನು ಪರಿಗಣಿಸಿ ಅವರಿಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ.

ನವೆಂಬರ್ 15ರಂದು ದಾವಣಗೆರೆಯಲ್ಲಿ ಚೆನ್ನಗಿರಿ ವಿರೂಪಾಕ್ಷಪ್ಪ ಸಭಾಭವನದಲ್ಲಿ ನಡೆಯುವ ರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು. ಅವರ ಸಾಹಿತ್ಯ ಸೇವೆ ಹೀಗೆ ನಿರಂತರವಾಗಿ ಮುಂದುವರೆಯಲಿ ಎಂದು ಹರಸಿ ಹಾರೈಸಿದ್ದಾರೆ. ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಸಾಲಿಗ್ರಾಮ ಗಣೇಶ ಶೆಣೈ ಅವರು ಡಾ.ಶಿರೂರು ಅವರಿಗೆ ಅಭಿನಂದನೆಸಲ್ಲಿಸಿದ್ದಾರೆ.