ಉಡುಪಿ : ರಾಜ್ಯ ಬ್ರಾಹ್ಮಣ ಅಭಿವೃದ್ಧಿ ನಿಗಮ ಯೋಜನೆಗಳಿಗೆ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗದೆ 2024&25ನೇ ಸಾಲಿನಲ್ಲಿ 10 ಕೋಟಿ ಅನುದಾನದಲ್ಲಿ 6.5 ಕೋಟಿ ರೂ. ವಾಪಾಸು ಹೋಗಿತ್ತು. ಪ್ರಸ್ತುತ ಅನೇಕ ಕಡೆಗಳಲ್ಲಿ ಮಾಹಿತಿ ಶಿಬಿರಗಳನ್ನು ಆಯೋಜಿಸಿದ್ದರಿಂದ ಅರ್ಜಿಗಳ ಸಂಖ್ಯೆಯೂ ಹೆಚ್ಚುತ್ತಿದೆ ಎಂದು ನಿಗಮ ನಿರ್ದೇಶಕ ಪಿ.ಎಂ. ಮಾಲತೇಶ್ ತಿಳಿಸಿದರು.
ತಾಲೂಕು ಬ್ರಾಹ್ಮಣ ಮಹಾಸಭಾ ಆಶ್ರಯದಲ್ಲಿ ಅಸಂಘಟಿತ ವಲಯದ ಬ್ರಾಹ್ಮಣ ಬಾಂಧವರಿಗೆ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ನಿಗಮ ವತಿಯಿಂದ ಆಯೋಜಿಸಲಾದ ಮಾಹಿತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಸ್ವ ಉದ್ಯೋಗಕ್ಕೆ ಶೇ. 20ರಷ್ಟು ಸಬ್ಸಿಡಿ ಹಾಗೂ ಶೇ.4ರಷ್ಟು ಬಡ್ಡಿದರಲ್ಲಿ 2 ಲಕ್ಷ ರೂ.ವರೆಗೆ ಸಾಲ ಸೌಲಭ್ಯ ನೀಡಲಾಗುತ್ತಿದೆ. ಪಿಯುಸಿ ಹಾಗೂ ಪದವಿ ಶಿಕ್ಷಣ ಪಡೆಯುವವರಿಗೆ ಪ್ರತಿ ವರ್ಷ 15 ಸಾವಿರ ರೂ. ವಿದ್ಯಾರ್ಥಿವೇತನ, ಇಂಜಿನಿಯರಿಂಗ್ ಮತ್ತು ಮೆಡಿಕಲ್ ಓದುವವರಿಗೆ ಸರ್ಕಾರಿ ಶುಲ್ಕದಲ್ಲಿ 3ನೇ 2 ಭಾಗ ಹಣವನ್ನು ಭರಿಸಲಾಗುತ್ತಿದೆ. ಸ್ಪರ್ಧಾತ್ಮಕ ಪರೀೆ ಬರೆಯುವವರಿಗೆ 1 ಲಕ್ಷ ರೂ. ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಹಿಂದುಳಿದ ವರ್ಗಗಳ ಆಯೋಗ ಮಾಜಿ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ, ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಶ್ರೀಕಾಂತ ಉಪಾಧ್ಯಾಯ, ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯೆ ಜ್ಯೋತಿ ಕೃಷ್ಣಹೆಬ್ಬಾರ್, ಉಡುಪಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್, ಪ್ರೊ,.ಶಂಕರ್, ದುರ್ಗಾಪ್ರಸಾದ್ ಉಪಸ್ಥಿತರಿದ್ದರು. ವಿನಯಕುಮಾರ್ ಕಬ್ಯಾಡಿ ಕಾರ್ಯಕ್ರಮ ನಿರೂಪಿಸಿದರು. .

