90 ವರ್ಷಗಳ ಯಕ್ಷಗಾನ ಪರಂಪರೆಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯ ಗೌರವ : ಪೆರ್ಮುದೆ ಶ್ರೀ ಶಾರದಾ ಯಕ್ಷಗಾನ ಮಂಡಳಿಗೆ ಮನ್ನಣೆ

0
16

ಪೆರ್ಮುದೆ: ಸುಮಾರು ಒಂಬತ್ತು ದಶಕಗಳ ಸುದೀರ್ಘ ಇತಿಹಾಸ ಹಾಗೂ ಯಕ್ಷಗಾನ ಕಲಾ ಪರಂಪರೆಯನ್ನು ಉಳಿಸಿ ಬೆಳೆಸುವಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ಪೆರ್ಮುದೆಯ ಶ್ರೀ ಶಾರದಾ ಯಕ್ಷಗಾನ ಮಂಡಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.

ಯಕ್ಷಗಾನ ಕಲೆಯ ಉಳಿವು, ಬೆಳವಣಿಗೆ ಹಾಗೂ ಸಾಂಸ್ಕೃತಿಕ ಪರಂಪರೆಯ ಸಂರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿರುವ ಮಂಡಳಿಯ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಪ್ರಶಸ್ತಿಯನ್ನು ಮಂಡಳಿಯ ಅಧ್ಯಕ್ಷರಾದ ಉಲ್ಲಾಸ್ ಆರ್. ಶೆಟ್ಟಿ ಅವರು ಗಣ್ಯರ ಸಮ್ಮುಖದಲ್ಲಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಂಡಳಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಸುಮಾರು 90 ವರ್ಷಗಳ ಕಲಾಸೇವೆಯ ಪಯಣದಲ್ಲಿ ಹಲವಾರು ಕಲಾವಿದರು ಹಾಗೂ ಕಲಾಭಿಮಾನಿಗಳನ್ನು ಬೆಳೆಸಿರುವ ಶ್ರೀ ಶಾರದಾ ಯಕ್ಷಗಾನ ಮಂಡಳಿಗೆ ಸಂದಿರುವ ಈ ಗೌರವವು ಮಂಡಳಿಯ ಸದಸ್ಯರು ಮತ್ತು ಯಕ್ಷಗಾನ ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ. ಮಂಡಳಿಯ ಮುಂದಿನ ಕಲಾಸೇವೆಯ ಪಯಣಕ್ಕೂ ಗಣ್ಯರು ಹಾಗೂ ಹಿತೈಷಿಗಳು ಶುಭ ಹಾರೈಸಿದ್ದಾರೆ.