Saturday, February 15, 2025
Homeರಾಜ್ಯರಾಜ್ಯ ಸರ್ಕಾರದ ಹೊಸ ನಿಯಮ: ಕೃತಕ ಬಣ್ಣ ಬಳಸಿದ ಕೇಕ್ ಮತ್ತು ಇತರ ಆಹಾರಗಳ ನಿಷೇಧ

ರಾಜ್ಯ ಸರ್ಕಾರದ ಹೊಸ ನಿಯಮ: ಕೃತಕ ಬಣ್ಣ ಬಳಸಿದ ಕೇಕ್ ಮತ್ತು ಇತರ ಆಹಾರಗಳ ನಿಷೇಧ

ರಾಜ್ಯಾದ್ಯಂತ ಕಲರ್ ಕಾಟನ್ ಕ್ಯಾಂಡಿ ಮಾರಾಟವನ್ನು ನಿಷೇಧ ಮಾಡಿ, ರಾಜ್ಯ ಸರ್ಕಾರ ಆದೇಶಿಸಿದೆ. ಒಂದು ವೇಳ ನಿಯಮ ಮೀರಿ ಕಲರ್ ಕ್ಯಾಂಡಿ ಮಾರಾಟ ಮಾಡಿದ್ರೇ ಅಂತವರಿಗೆ 7 ವರ್ಷ ಜೈಲು, 10 ಲಕ್ಷ ದಂಡವನ್ನು ವಿಧಿಸುವುದಾಗಿ ಎಚ್ಚರಿಕೆ ನೀಡಿದೆ.

ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಕಾಟನ್ ಕ್ಯಾಂಡಿಗಳ ಗುಣಮಟ್ಟ ಕೃತಕ ಬಣ್ಣಗಳ ಬೆರೆಸುವಿಕೆಯಿಂದಾಗಿ ಉತ್ತಮವಾಗಿಲ್ಲದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಕಾಟನ್ ಕ್ಯಾಂಡಿಗಳ ಮಾದರಿಗಳನ್ನು ಸಂಗ್ರಹಿಸಿ ರಾಜ್ಯ ಪ್ರಯೋಗಾಲಯಗಳಲ್ಲಿ ವಿಶ್ಲೇಷಣೆಗೊಳಪಡಿಸಲಾಗಿರುತ್ತದೆ ಎಂದಿದ್ದಾರೆ.

ಹೀಗಾಗಿ ಕೇಕ್ ನಲ್ಲೂ ಬಳಸುವ ಕೃತಕ ಬಣ್ಣವನ್ನು ನಿಷೇಧಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ಕೇಕ್ ನಲ್ಲಿ ಬಳಸುವ ಬಣ್ಣದಲ್ಲಿ ಅಪಾಯಕಾರಿ ಅಂಶಗಳು ಪತ್ತೆಯಾದ ಹಿನ್ನೆಲೆ ಶೀಘ್ರವೇ ಸರ್ಕಾರ ಆದೇಶ ಹೊರಡಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ಜನರು ಹೆಚ್ಚು ಸೇವನೆ ಮಾಡುವ ಕೇಕ್‌ಗಳ ಮೇಲೆ ನಿಗಾ ವಹಿಸಲಾಗುತ್ತಿದೆ. ಕೇಕ್‌ಗೆ ಬಳಸುವ ಮೈದಾಹಿಟ್ಟು, ಕೋಕೋ ಪೌಡರ್, ಕ್ರೀಮ್‌ಗಳಿಗೆ ಬಳಸುವ ಪದಾರ್ಥಗಳು, ಪ್ಲೇವರ್‌ಗಳು ಹಾಗೂ ಕಲರ್‌ಗಳನ್ನು ಪರಿಶೀಲನೆಗೆ ಒಳಪಡಿಸಲಾಗುತ್ತಿದೆ. ಪೈನಾಪಲ್, ರೆಡ್ ವೆಲ್ವೆಟ್, ಚಾಕೋಲೇಟ್ ಸೇರಿದಂತೆ ವಿವಿಧ ಪ್ಲೇವರ್‌ಗಳನ್ನ ಜನರು ಇಷ್ಟ ಪಡುವುದರಿಂದ ಅವುಗಳ ತಯಾರಿಕೆ ಅಥವಾ ಅದಕ್ಕೆ ಹಾಕುವ ಪದಾರ್ಥಗಳು ಜನರ ಆರೋಗ್ಯಕ್ಕೆ ಪೂರಕವಾಗಿದೆಯೇ ಅಥವಾ ಮಾರಕವಾಗಿದೆಯೇ ಎಂಬುದರ ಪರೀಕ್ಷೆ ನಡೆಯಲಿದೆ. ಸುಮಾರು 264 ಕಡೆಗಳಲ್ಲಿ ಕೇಕ್‌ಗಳ ಸ್ಯಾಂಪಲ್ ಪಡೆದು ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ. ಇದರ ವರದಿಗೆ ಇಲಾಖೆ ಕಾಯುತ್ತಿದೆ. ಒಂದು ವೇಳೆ, ವರದಿ ಪಾಸಿಟಿವ್ ಬಂದಿದ್ದೇ ಆದಲ್ಲಿ ಕೆಲವೊಂದು ಪದಾರ್ಥಗಳ ಮೇಲೆ ನಿರ್ಬಂಧ ಹೇರಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಆಹಾರಗಳಿಗೆ ಬಳಸುವ ಕೆಲವೊಂದು ಪದಾರ್ಥಗಳಿಗೆ ನಿರ್ಬಂಧ ವಿಧಿಸುತ್ತಿರುವುದನ್ನು ಬೇಕರಿ ಮಾಲೀಕರ ಸಂಘಟನೆ ಸ್ವಾಗತಿಸಿದೆ. ನಾವು ಸಹಜ ಕಲರ್ ಬಳಕೆ ಮಾಡುತ್ತೇವೆ. ಕೆಮಿಕಲ್ ಬಳಕೆ ಮಾಡಲ್ಲ ಆಹಾರ ಇಲಾಖೆಯ ಕ್ರಮ ಸರಿಯಾಗಿದೆ ಎಂದು ಬೇಕರಿ ಮಾಲೀಕರು ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular